Breaking NewsLatestಮೆಟ್ರೋರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್​​​ನ 16 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ : ರಮೇಶ್ ಜಾರಕಿಹೊಳಿ

ಬೆಂಗಳೂರು : ಕಾಂಗ್ರೆಸ್ ನ 16 ಶಾಸಕರ ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಹೈಕಮಾಂಡ್ ಒಪ್ಪಿದ್ರೇ. ಪಕ್ಷಕ್ಕೆ ಕರೆತರುವೆ. ಜೆಡಿಎಸ್ ಪಕ್ಷದ ಮೂವರು ಶಾಸಕರು ಕೂಡ ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಪೋಟಕ ಬಾಂಬ್​​​ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಮೂವರು ಶಾಸಕರು ಸಂಪರ್ಕದಲ್ಲಿದ್ದಾರೆ. ಕಳೆದ ಬಾರಿ 36 ಶಾಸಕರು ಸಂಪರ್ಕದಲ್ಲಿದ್ದರು. 17 ಶಾಸಕರು ಮಾತ್ರ ಪಕ್ಷಕ್ಕೆ ಬಂದ್ರು. 19 ಶಾಸಕರು ತಾಂತ್ರಿಕ ಕಾರಣದಿಂದ ಬರಲಾಗಲಿಲ್ಲ. ಈಗಲೇ ನಮ್ಮ ಸಂಪರ್ಕದಲ್ಲೇ ಇದ್ದಾರೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಕೇಳುವವರೇ ಇಲ್ಲದಂತೆ ಮಾಡುತ್ತೇನೆ ಎಂದು ಹೇಳಿದರು.

ನಮ್ಮ ಜೊತೆಗೆ ಬಿಜೆಪಿಗೆ ಬಂದವರಾರೂ ಬಿಟ್ಟು ಹೋಗುವುದಿಲ್ಲ. ವಿಧಾನಸಭಾ ಚುನಾವಣೆ ಹತ್ತಿರ ಬಂದಾಗ ಎಲ್ಲಾ ಗೊತ್ತಾಗುತ್ತದೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡಲ್ಲ. ಇಲ್ಲೇ ಇದ್ದು, ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.

ಮತ್ತೊಂದೆಡೆ ಕಾಂಗ್ರೆಸ್ ನ ವಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಬಿಜೆಪಿ ಪಕ್ಷದ ಸಚಿವರು, ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ. ನಾವು ಅವರು ಹೇಳಿದಂತೆ ಬಹಿರಂಗವಾಗಿ ಹೇಳೋದಿಲ್ಲ. ಸಮಯ ಬರಲಿ ಕಾದು ನೋಡಿ ಅಂತ ಬಾಂಬ್ ಸಿಡಿಸಿದ್ದಾರೆ. ಇದಕ್ಕೆ ಧ್ವನಿ ಗೂಡಿಸುವಂತೆ ಬಿಜೆಪಿ ಪಕ್ಷದ ಶಾಸಕ ಯತ್ನಾಳ್ ಕೂಡ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಲಸಿಗರು ಹಾರಿ ಹೋಗಲಿದ್ದಾರೆ. ಸಂಪುಟ ವಿಸ್ತರಣೆ ಮಾಡಿ ಅಂತ ಹೇಳಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button