Breaking NewsLatestಜಿಲ್ಲಾ ಸುದ್ದಿರಾಜಕೀಯರಾಜ್ಯಶಿವಮೊಗ್ಗಸುದ್ದಿ
ಬಿಜೆಪಿಯಿಂದ ಕಾಂಗ್ರೆಸ್ಸಿಗೆ ಯಾರೂ ಹೋಗಲ್ಲ: ಸಚಿವ ನಾರಾಯಣಗೌಡ

ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಡಾ.ನಾರಾಯಣಗೌಡ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾರೊಬ್ಬರು ಹೋಗುವುದಿಲ್ಲ. ಅವರಿಬ್ಬರಿಗೆ ಮಾಡುವುದಕ್ಕೆ ಕೆಲಸ ಇಲ್ಲ, ಆ ರೀತಿ ಹೇಳುತ್ತಿದ್ದಾರೆ ಎಂದರು.
ಈಗ ನಮ್ಮ ಸರ್ಕಾರ ಇದೆ, ನಮಗೆ ಸಾಕಷ್ಟು ಕೆಲಸ ಇದೆ. ಮತ್ತೊಮ್ಮೆ ಬಿಜೆಪಿ ಸರ್ಕಾರ ಬರಲಿದೆ ಅವರು ವಿಶ್ವಾಸ ವ್ಯಕ್ತಪಡಿಸಿದರು.
