ಮನರಂಜನೆಸಿನಿಮಾಸೆಲೆಬ್ರಿಟಿ
ಹಾಲಿನಲ್ಲಿ ಮಿಂದೆದ್ದ ಜೇಮ್ಸ್ ಪೋಸ್ಟರ್

ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ ಜೇಮ್ಸ್ ಸಿನಿಮಾದ ಪೋಸ್ಟರ್ ಗಣರಾಜ್ಯೋತ್ಸವದ ಪ್ರಯುಕ್ತ ರಿಲೀಸ್ ಆಗಿದೆ. ಅಪ್ಪು ಅವರನ್ನ ಸಾಕಷ್ಟು ಮಿಸ್ ಮಾಡಿಕೊಳ್ತಿರುವ ಅಭಿಮಾನಿಗಳು ನೋವಿನಲ್ಲೂ ಸಂಭ್ರಮಿಸುತ್ತಿದ್ದಾರೆ. ಮಕ್ಕಳ ಕೈಯಿಂದ ಜೇಮ್ಸ್ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು ಅಭಿಮಾನಿಗಳು ಕಾಯಿ ಒಡೆದು, ಪಟಾಕಿ ಸಿಡಿಸಿ, ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸುತ್ತಿದ್ದಾರೆ.
ಚೇತನ್ ಕುಮಾರ್ ನಿರ್ದೇಶನದ ಜೇಮ್ಸ್ ಸಿನಿಮಾದಲ್ಲಿ ಪುನೀತ್ ಸೈನಿಕನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ನಟ ಪುನೀತ್ಗೆ ಜೋಡಿಯಾಗಿ ಪ್ರಿಯಾ ಆನಂದ್ ಕಾಣಿಸಿಕೊಂಡಿದ್ದು ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಕಷ್ಟು ನಿರೀಕ್ಷೆ ಮೂಡಿಸಿರುವ ಜೇಮ್ಸ್ ಸಿನಿಮಾ ಪುನೀತ್ ಹುಟ್ಟುಹಬ್ಬದ ಪ್ರಯುಕ್ತ ಮಾರ್ಚ್ 17ರಂದು ಬಿಡುಗಡೆಯಾಗೋ ಸಾಧ್ಯತೆ ಇದೆ.




