Latestಮನರಂಜನೆಸಿನಿಮಾಸೆಲೆಬ್ರಿಟಿ
ಪುನೀತ್ ವಿಚಾರದಲ್ಲಿ ಕೊಟ್ಟ ಮಾತು ತಪ್ಪಿದ ಸಿಎಂ: ಕಾಂಗ್ರೆಸ್ ಕಿಡಿ

ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೊಟ್ಟ ಮಾತನ್ನ ಉಳಿಸಿಕೊಂಡಿಲ್ಲ ಎಂದು ರಾಜ್ಯ ಕಾಂಗ್ರೆಸ್ ಕಿಡಿ ಕಾರಿದೆ.
ನಿನ್ನೆ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ 128 ಮಂದಿಗೆ ಪದ್ಮ ಪ್ರಶಸ್ತಿಯನ್ನ ನೀಡಿ ಗೌರವಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ದಿವಂಗತ ನಟ ಪುನೀತ್ ರಾಜ್ ಕುಮಾರ್ ಹೆಸರನ್ನ ಪದ್ಮ ಪ್ರಶಸ್ತಿಗೆ ಶಿಫಾರಸ್ಸು ಮಾಡುವುದಾಗಿ ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಆದರೆ ಪ್ರಶಸ್ತಿ ಪಟ್ಟಿಯಲ್ಲಿ ಅವರ ಹೆಸರಿಲ್ಲ.
ಪ್ರಧಾನ ಮಂತ್ರಿಗಳಿಗೆ ಯಾರು ಏನು ಶಿಫಾರಸ್ಸು ಮಾಡಿದರೋ ಗೊತ್ತಿಲ್ಲ. ಆದರೆ ಸಿಎಂ ಬಸವರಾಜ ಬೊಮ್ಮಾಯಿ ಪುನೀತ್ ವಿಚಾರದಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ ಎಂದು ಟ್ವೀಟ್ ಮೂಲಕ ತಮ್ಮ ಅಸಮಾಧಾನ ಹೊರ ಹಾಕಿದೆ.



