Breaking NewsLatestಮೆಟ್ರೋರಾಜ್ಯಸುದ್ದಿ

ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ: ಸಿಎಂ ಬೊಮ್ಮಾಯಿ

ಬೆಂಗಳೂರು : ಬಜೆಟ್ ಮಂಡನೆ ಸಂಬಂಧ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಫೆಬ್ರವರಿ 14ರಿಂದ ಆರಂಭಿಸಲಾಗುತ್ತದೆ. ಮಾರ್ಚ್ ಮೊದಲವಾರ ರಾಜ್ಯ ಬಜೆಟ್ ಮಂಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಚಿವ ಸಂಪುಟದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಜೆಟ್ ಅಧಿವೇಶನವನ್ನು ಫೆಬ್ರವರಿ 14ರಿಂದ ಆರಂಭಗೊಳ್ಳಲಿದೆ. ಫೆಬ್ರವರಿ 14ರಿಂದ ವಿಧಾನ ಮಂಡಲದ ಜಂಟಿ ಅಧಿವೇಶನ ಆರಂಭಗೊಳ್ಳಲಿದ್ದು, ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ ಆಗಲಿದೆ ಎಂದರು.

ಕೊರೋನಾ ನಿಯಂತ್ರಣಕ್ಕಾಗಿ ತಜ್ಞರು ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ನಿಯಂತ್ರಣ ಕ್ರಮಗಳನ್ನು ಮುಂದುವರೆಸುವುದಾ ಅಥವಾ ರದ್ದು ಪಡಿಸುವುದಾ ಎನ್ನುವ ಬಗ್ಗೆ ವರದಿಯನ್ನು ನೀಡುವಂತೆ ತಜ್ಞರಿಗೆ ಸೂಚಿಸಲಾಗಿದೆ. ಅವರು ವರದಿಯನ್ನು ಸಲ್ಲಿಸಿದ ಬಳಿಕ, 3-4 ದಿನಗಳಲ್ಲಿ ಕೋವಿಡ್ ರೂಲ್ಸ್ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದ ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button