ಉತ್ತರ ಕನ್ನಡಜಿಲ್ಲಾ ಸುದ್ದಿ
ಡೋಂಗ್ರಿ ಸೇತುವೆ ನಿರ್ಮಾಣಕ್ಕೆ 25 ಕೋಟಿ ಅನುಮೋದನೆ: ಸಚಿವ ಹೆಬ್ಬಾರ್

ಕಾರವಾರ : ಅಂಕೋಲಾ ತಾಲೂಕಿನ ಡೋಂಗ್ರಿ ಸೇತುವೆಯನ್ನು ಸುಮಾರು 25
ಕೋಟಿ ರೂಪಾಯಿ ಅನುದಾನದಲ್ಲಿ ಸುಸಜ್ಜಿತವಾಗಿ ನಿರ್ಮಾಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಅವರು ತಿಳಿಸಿದ್ದಾರೆ.
ರಾಮನಗುಳಿ,ಡೋಂಗ್ರಿ ಸುತ್ತ ಮುತ್ತಲಿನ ಜನರು ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ತೆರಳಲು ದೋಣಿಯನ್ನು ಆಶ್ರಯಿಸಬೇಕಾಗಿತ್ತು.ಸೇತುವೆ
ನಿರ್ಮಾಣದಿಂದ ಈ ಭಾಗದ ಜನರ ದಶಕಗಳ ಕನಸು ನನಸಾದಂತಾಗುತ್ತದೆ ಎಂದು ಹೇಳಿದ್ದಾರೆ.
ತಾವು ಹಾಗೂ ಸ್ಥಳೀಯ ಶಾಸಕಿ ರೂಪಾಲಿ ನಾಯ್ಕ ಅವರು ಸೇತುವೆ ನಿರ್ಮಾಣದ
ಕುರಿತು ಮಾಡಿದ ಮನವಿಗೆ ಕೂಡಲೇ ಸ್ಪಂದಿಸಿ ಸುಸಜ್ಜಿತ ಸೇತುವೆ ನಿರ್ಮಾಣಕ್ಕೆ
ಅನುಮೋದನೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರಿಗೆ ರಾಮನಗುಳಿ, ಡೋಂಗ್ರಿ ಭಾಗದ ಜನತೆ ಪರವಾಗಿ ಧನ್ಯವಾದಗಳನ್ನು ಸಲ್ಲಿಸುವುದಾಗಿ ಸಚಿವ ಶಿವರಾಮ್ ಹೆಬ್ಬಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




