Latestರಾಜ್ಯ

ಪುನೀತ್ ರಾಜ್‍ಕುಮಾರ್ ಸಾಧನೆ ಮುಂದಿನ ಪೀಳಿಗೆಗೆ ತಿಳಿಯಬೇಕು

ಬೆಂಗಳೂರು: ಇತ್ತೀಚೆಗಷ್ಟೆ ನಮ್ಮನ್ನಗಲಿದ ನಟ ಪುನೀತ್ ರಾಜ್‍ಕುಮಾರ್ ಅವರ ಸಾಧನೆ ಮುಂದಿನ ಪೀಳಿಗೆಗೆ ತಿಳಿಯಬೇಕು. ಅವರ ಆದರ್ಶದ ಜೀವನ, ಸಾಧನೆ, ಜೀವನ ಮೌಲ್ಯಗಳಿಂದ ಅವರು ಇಂದಿಗೂ‌ ನಮ್ಮೆಲ್ಲರ ಮನದಲ್ಲಿ ಜೀವಂತವಾಗಿದ್ದಾರೆ ಎಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಹೇಳಿದರು.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಭಾವಿ ಪಾಲಿಕೆ ಕಚೇರಿಯಲ್ಲಿ ಪುನೀತ್ ರಾಜ್‍ಕುಮಾರ್ ಅವರ ಸವಿನೆನಪಿಗಾಗಿ‌ ನಿರ್ಮಿಸಲಾದ ಒಳಾಂಗಣ ಕ್ರೀಡಾಂಗಣವನ್ನು ಲೋಕಾರ್ಪಣೆ ಮಾಡಿ‌ ಮಾತನಾಡಿದ ಅವರು, ಯುತ್ ಐಕಾನ್ ಎಂತಲೇ ಖ್ಯಾತರಾಗಿದ್ದ ಪುನೀತ್ ಅವರ ಹೆಸರಿನಲ್ಲಿ ಈ ಸುಸಜ್ಜಿತವಾದ ಒಳಾಂಗಣ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಈ‌ ಮೂಲಕ ಈ ಭಾಗದ ಕ್ರೀಡಾಸಕ್ತ ಯುವಕರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದರು.

ಚಿಕ್ಕ ವಯಸ್ಸಿನಲ್ಲಿಯೇ ಅಗಾಧ ಸಾಧನೆ ಮಾಡಿ ಕರ್ನಾಟಕ ರತ್ನ ಪ್ರಶಸ್ತಿಗೆ ಭಾಜನರಾದ ಪುನೀತ್ ಅವರ ಹೆಸರಿನಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ಅವರ ಹೆಸರನ್ನು ಇರಿಸಲಾಗಿದೆ. ಇನ್ನು ನಟ ಪುನೀತ್ ತಮ್ಮ ಸಾವಿನ ಬಳಿಕವೂ ಸಾಕಷ್ಟು ಜನರಿಗೆ ಪ್ರೇರಣೆಯಾಗಿದ್ದಾರೆ. ಅವರ ಅಕಾಲಿಕ ನಿಧನದ ಬಳಿಕ ಅವರ ಸಾವಿರಾರು ಅಭಿಮಾನಿಗಳು ಸ್ವಯಂ ಪ್ರೇರಿತರಾಗಿ ನೇತ್ರದಾನ ಮಾಡುವ ಮೂಲಕ ನಟನೊಬ್ಬನ ಆದರ್ಶಗಳನ್ನು ಜೀವಂತವಿರಿಸಿದ್ದಾರೆ ಎಂದರು.

ಈ ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಸದಸ್ಯರಾದ ಮೋಹನ್ ಕುಮಾರ್, ದಾಸೇಗೌಡ, ಉಮೇಶ್ ಶೆಟ್ಟಿ, ವಾಗೀಶ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button