
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 74ನೇ ವರ್ಷದ ಪುಣ್ಯತಿಥಿ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ನಮನ ಸಲ್ಲಿಸಿದ್ದಾರೆ.
ಬಾಪು ಪುಣ್ಯತಿಥಿಯಂದು ಅವರನ್ನು ಸ್ಮರಿಸುತ್ತಿದ್ದೇನೆ. ಅವರ ಉದಾತ್ತ ಆದರ್ಶಗಳನ್ನು ಮತ್ತಷ್ಟು ಜನಪ್ರಿಯಗೊಳಿಸುವುದು ನಮ್ಮೆಲ್ಲರ ಪ್ರಯತ್ನವಾಗಿದೆ ಎಂದಿರುವ ಮೋದಿ ಇಂದು ಹುತಾತ್ಮರ ದಿನದಂದು ನಮ್ಮ ದೇಶವನ್ನು ದೈರ್ಯದಿಂದ ರಕ್ಷಿಸಿದ ಎಲ್ಲಾ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಭಾರತದ ಸ್ವಾತಂತ್ರ್ಯಕೋಸ್ಕರ ಪ್ರಾಣತ್ಯಾಗ ಮಾಡಿದ ಹೋರಾಟಗಾರರ ಸ್ಮರಣೆಗಾಗಿ ದೇಶದಾದ್ಯಂತ ಈ ದಿನವನ್ನ ಹುತಾತ್ಮರ ದಿನವನ್ನಾಗಿಯೂ ಆಚರಣೆ ಮಾಡಲಾಗುತ್ತಿದೆ.
ಇಂದು ಪ್ರಸಾರವಾಗುವ 85ನೇ ಸಂಚಿಕೆಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ವರ್ಷದ ಮೊದಲ ಆವೃತ್ತಿಯಾಗಲಿದ್ದು, ಇಂದು ಗಾಂಧೀಜಿ ಅವರ ಪುಣ್ಯ ತಿಥಿಯಾದ್ದರಿಂದ ಅವರ ಸ್ಮರಣೆಯನ್ನ ಮಾಡಿದ ಬಳಿಕ ಕಾರ್ಯಕ್ರಮ ಪ್ರಾರಂಭವಾಗಲಿದೆ ಎಂದು ಪ್ರಧಾನ ಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.



