Breaking NewsLatestರಾಷ್ಟ್ರೀಯಸುದ್ದಿ

India Covid Updates : ದೇಶದಲ್ಲಿ ಇಂದು ಹೊಸದಾಗಿ 1.72 ಲಕ್ಷ ಕೊರೊನಾ ಕೇಸ್​​ ಪತ್ತೆ

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಇಳಿಕೆ ಕಂಡುಬರುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,72,433 ಲಕ್ಷ ಕೋವಿಡ್​​ ಪ್ರಕರಣಗಳು ಪತ್ತೆಯಾಗಿವೆ. ಇದೇ ಸಂದರ್ಭದಲ್ಲಿ 1,008 ಮಂದಿ ಸಾವನ್ನಪ್ಪಿದ್ದಾರೆ.

ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,98, 983 ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 15,33,921ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 2,59,107 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,97,70,414ಕ್ಕೆ ತಲುಪಿದೆ.

ಪ್ರತಿದಿನ ದೇಶದಲ್ಲಿ ಕೋವಿಡ್ ಪಾಸಿಟಿವ್ ಸೋಂಕಿತರ ದರ ಶೇಕಡಾ 10.99ರಷ್ಟು ಇದೆ. ಇನ್ನು ಭಾರತದಲ್ಲಿ ನಿನ್ನೆ ಒಂದೇ 15,69,449 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 73,41,92,614 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Spread the love

Related Articles

Leave a Reply

Your email address will not be published. Required fields are marked *

Back to top button