Breaking NewsLatestರಾಷ್ಟ್ರೀಯಸುದ್ದಿ
India Covid Updates : ದೇಶದಲ್ಲಿ ಇಳಿಕೆ ಕಂಡ ಕೊರೊನಾ : ಹೊಸದಾಗಿ 1.49 ಲಕ್ಷ ಕೇಸ್ ಪತ್ತೆ

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಇಳಿಕೆ ಕಂಡುಬರುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 1,49,394 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದೇ ಸಂದರ್ಭದಲ್ಲಿ 1072 ಮಂದಿ ಸಾವನ್ನಪ್ಪಿದ್ದಾರೆ.
ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,19,52,712ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,00,055 ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 14,35,569ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 2,46,674 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,00,17,088 ಕ್ಕೆ ತಲುಪಿದೆ.
ದೇಶದಲ್ಲಿ ಒಂದೇ 16,11,666 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 73,58,04,280 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
