Breaking NewsLatest
Yogi Adityanath: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಾಮಪತ್ರ ಸಲ್ಲಿಕೆ

ಲಖ್ನೋ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶುಕ್ರವಾರ ಗೋರಖ್ಪುರ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಯೋಗಿ ಆದಿತ್ಯನಾಥ ಅವರು ನಾಮಪತ್ರ ಸಲ್ಲಿಕೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ಹಲವರು ಉಪಸ್ಥಿತರಿದ್ದರು.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ವಿಧಾನಸಭಾ ಚುನಾವಣೆ ನಡೆಯಲಿದ್ದು ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಐದು ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು ಮಾರ್ಚ್ 10 ರಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಹೊರ ಬೀಳಲಿದೆ.
