Breaking NewsLatestಜಿಲ್ಲಾ ಸುದ್ದಿರಾಜಕೀಯರಾಮನಗರ

ಆಡಳಿತ ಪಕ್ಷದ ಶಾಸಕರಿಂದ ಮಂತ್ರಿಗಳ ಬಗೆಗಿನ ಹೇಳಿಕೆ ಸಲ್ಲ: ಕುಮಾರಸ್ವಾಮಿ

ರಾಮನಗರ: ಆಡಳಿತ ಪಕ್ಷದ ಶಾಸಕರೇ ಸರ್ಕಾರದ ಬಗ್ಗೆ ಹಾದಿಬೀದಿಯಲ್ಲಿ ಲಘುವಾಗಿ ಮಾತನಾಡುವುದು, ಮಂತ್ರಿಗಳ ಬಗ್ಗೆ ಹೇಳಿಕೆಗಳನ್ನು ನೀಡುವುದು ಉತ್ತಮ ನಡವಳಿಕೆ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಚನ್ನಪಟ್ಟಣದದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಮಸ್ಯೆಗಳಿದ್ದರೆ ಪಕ್ಷದ ಚೌಕಟ್ಟಿನೊಳಗೆ ಬಗೆಹರಿಸಿಕೊಳ್ಳಬೇಕು. ಆದು ಬಿಟ್ಟು ಶಿಸ್ತಿನ ಪಕ್ಷ ಎಂದು ಟ್ಯಾಗ್‍ಲೈನ್ ಹಾಕಿಕೊಂಡ
ಪಕ್ಷದಲ್ಲಿ ದಿನನಿತ್ಯ ಶಾಸಕರು, ಸರ್ಕಾರ ಹಾಗೂ ಮಂತ್ರಿಗಳ ಬಗ್ಗೆ ಮಾತನಾಡುವುದು ಉತ್ತಮ ಬೆಳವಣಿಗೆ ಅಲ್ಲ. ಇವತ್ತು ಅವರ ಪರಿಸ್ಥಿತಿ ನೋಡಿದರೆ ಮುಂದಿನ ದಿನಗಳಲ್ಲಿ ಅವರ ಭವಿಷ್ಯ ಏನು ಎಂದು ಯಾರು ಬೇಕಿದ್ದರೂ ಅರ್ಥೈಸಿಕೊಳ್ಳುತ್ತಾರೆ ಎಂದರು.

ರಾಮನಗರ ಪ್ರಾಧಿಕಾರದ ಹಗರಣ ಬಗ್ಗೆ ಸದನದಲ್ಲಿ ಚರ್ಚೆ :

2013ರಲ್ಲಿ ನಡೆದ ರಾಮನಗರ ಪ್ರಾಧಿಕಾರದ ಹಗರಣ ನಡೆದು 10 ವರ್ಷ ಕಳೆದಿದೆ. ಹಗರಣದಲ್ಲಿ 16 ಕೋಟಿ ರೂ. ಹಣ ಲೂಟಿ ಮಾಡಿದ್ದಾರೆ. ಆದರೆ ಸರ್ಕಾರ ಹಗರಣವನ್ನು
ಸಿಬಿಐಗೆ ವಹಿಸಿತ್ತು. ಅದರ ಹಗರಣ ನಡೆಸಿದ ಅಧಿಕಾರಿಗೆ ದೊಡ್ಡ ಹುದ್ದೆಗಳನ್ನು ನೀಡಿದ್ದಾರೆ. ಬಿಡಿಎ, ಕಾರ್ಪುರೇಷನ್ ಹುದ್ದೆಯನ್ನು ನೀಡಿದ್ದಾರೆ. ಸಿಬಿಐಗೆ ವಹಿಸಿದ್ದರೂ ಸರಿಯಾದ ತನಿಖೆ ನಡೆಸಲಿಲ್ಲ. ರಾಜ್ಯ ಸರ್ಕಾರದಲ್ಲಿ ಇರುವವರೇ ರಕ್ಷಣೆ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್‍ಡಿಕೆ ಆರೋಪಿಸಿದರು.

ರಾಮನಗರ ಅಭಿವೃದ್ಧಿ ಪ್ರಾಧಿಕಾರ ಹಗರಣ ವಿಚಾರದ ಬಗ್ಗೆ ವಿಧಾನಸೌಧದಲ್ಲಿ ಚರ್ಚೆ ಮಾಡುತ್ತೇನೆ. ಪ್ರಾಧಿಕಾರದ ಇಂದಿನ ಪರಿಸ್ಥಿತಿ ಬಗ್ಗೆ ಮಾಹಿತಿ ತರಿಸಿಕೊಂಡುದ್ದೇನೆ. ಉಳಿದಿರುವ 40- 50 ಸೈಟ್‍ಗಳನ್ನು ಮಾರಾಟ ಮಾಡಲು ಆಗುತ್ತಿಲ್ಲ. ಮಾರಾಟ ಮಾಡಲು ಟೆಕ್ನಿಕಲ್ ಸಮಸ್ಯೆಗಳಿವೆ. ಪ್ರಾಧಿಕಾರದಲ್ಲಿ ಹಣದ ಕೊರತೆಯು ಇದೆ ಎಂದು ಹೇಳಿದರು.

ರಾಷ್ಟ್ರೀಯ ಪಕ್ಷಗಳು ತಿರಸ್ಕೃತ

ಇಡೀ ದೇಶದಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಜನರು ತಿರಸ್ಕರಿಸುತ್ತಿದ್ದಾರೆ. ಪ್ರಾದೇಶಿಕ ಪಕ್ಷಗಳಿಗೆ ಹೆಚ್ಚೆಚ್ಚು ಮಣೆ ಹಾಕುತ್ತಿದ್ದಾರೆ. ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಕಳೆದ 75 ವರ್ಷಗಳಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ನೀರಾವರಿ ಸೇರಿದಂತೆ ವಿವಿಧ ವಲಯಗಳಲ್ಲಿ ಭಾರೀ ಅನ್ಯಾಯ ಮಾಡಿವೆ. ಆದರೆ, ಅಧಿಕಾರದಲ್ಲಿದ್ದ ಅಲ್ಪಸ್ವಲ್ಪ ಅವಧಿಯಲ್ಲೇ ಜೆಡಿಎಸ್ ಪಕ್ಷವು ಜನರ ಆಶೋತ್ತರಗಳನ್ನು ಈಡೇರಿಸಿದೆ. ಈ ಬಗ್ಗೆ ಸರಕಾರದ ಬಳಿ ನೈಜದಾಖಲೆಗಳೇ ಇವೆ. ಹಾಗೆಯೇ, ಭಾಷೆಗೆ ಸಂಬಂಧಿಸಿದಂತೆ ಕನ್ನಡವು ದೆಹಲಿಯಿಂದ ನಾನಾ ರೀತಿಯ ಕಿರುಕುಳ ಅನುಭವಿಸುತ್ತಿದೆ. ಇದನ್ನು ತಪ್ಪಿಸಬೇಕಿದೆ ಎಂದರು.

ಇದೇ ವೇಳೆ ರೈಮುಖಂಡರನ್ನೂ ಒಗ್ಗೂಡಿ ಲಾಗುವುದು. ಜಾತಿ, ಮತ ಮತ್ತು ಧರ್ಮವನ್ನು ಮೀರಿ ಎಲ್ಲರನ್ನೂ ಒಂದು ವೇದಿಕೆಗೆ ತಂದು ಕಾರ್ಯಕ್ರಮ ರೂಪಿಸಲಾಗುವುದು. ಎಲ್ಲ ಮುಖಂಡರ ಜತೆ ಮುಕ್ತವಾಗಿ ಚರ್ಚೆ ನಡೆಸಲು ನಾನು ಸಿದ್ಧನಿದ್ದೇನೆ. ಎರಡನೇ ಬಾರಿ ನಾನು ಮುಖ್ಯಮಂತ್ರಿಯಾದಾಗ ನನ್ನ 14 ತಿಂಗಳ ಆಡಳಿತಾವಧಿಯಲ್ಲಿ ನಾಲ್ಕೈದು ಬಾರಿ ವಿಧಾನಸಭೆಯಲ್ಲೇ ರೈತರ ಸಭೆ ಮಾಡಿದ್ದೇನೆ. ಆದರೆ, ಈ ಸರಕಾರ ಅಂಥ ಒಂದು ಸಭೆಯನ್ನೂ ಮಾಡಿಲ್ಲ ಎಂದು ಟೀಕಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button