Latestಮನರಂಜನೆಸಿನಿಮಾ

ಇಂದು ಸಂಜೆ 6.30ಕ್ಕೆ ಗಾಯಕಿ ಲತಾ ಮಂಗೇಶ್ಕರ್ ಅಂತ್ಯಕ್ರಿಯೆ

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಇಂದು ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ.ಅವರು ತಮ್ಮ 92ನೇ ವಯಸ್ಸಿನಲ್ಲಿ ಗಾನ ನಿಲ್ಲಿಸಿದ್ದಾರೆ.

ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಲತಾ ಮಂಗೇಶ್ಕರ್ ನಿಧನರಾಗಿದ್ದಾರೆ. ಇಂದು ಸಂಜೆ 6.30 ಗಂಟೆಗೆ ಲತಾ ಮಂಗೇಶ್ಕರ್​ ಅವರ ಅಂತ್ಯಕ್ರಿಯೆ ನಡೆಯಲಿದೆ. ಮಧ್ಯಾಹ್ನ 12:30 ಲತಾ ಮಂಗೇಶ್ಕರ್​ ಅವರ ಮನೆಗೆ ಅವರ ಮೃತದೇಹವನ್ನು ತರಲಾಗುತ್ತೆ. ಸಂಜೆ ವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇನ್ನೂ ಸಂಜೆ 6.30ಕ್ಕೆ ಗಾನ ಕೋಗಿಲೆ ಲತಾ ಮಂಗೇಶ್ಕರ್​ ಅವರ ಅಂತ್ಯಕ್ರಿಯೆ ಮುಂಬೈನ ಶಿವಾಜಿ ಪಾರ್ಕ್​ನಲ್ಲಿ ನೆರವೇರಲಿದೆ.

ಲತಾ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ದೇಶದಲ್ಲಿ ಎರಡು ದಿನಗಳ ಕಾಲ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದ್ದು, ರಾಷ್ಟ್ರಧ್ವಜವು ಅರ್ಧ ಮಟ್ಟದಲ್ಲಿ ಹಾರಾಡಲಿದೆ. ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು ಎಂದು ತಿಳಿಸಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button