ಜಿಲ್ಲಾ ಸುದ್ದಿದಾವಣಗೆರೆ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆರೋಪಿಗೆ 20 ವರ್ಷ ಜೈಲು

ದಾವಣಗೆರೆ: ಅಪ್ರಾಪ್ತ ಯುವತಿಯ ಮೇಲೆ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿದೆ. ದಾವಣಗೆರೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಶೇಷ ನ್ಯಾಯಾಧೀಶರಾದ ಶ್ರೀಪಾದ್ ಎನ್ ತೀರ್ಪು ನೀಡಿದ್ದಾರೆ.

ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ದೇವಿದುರ್ಗಾ ಗ್ರಾಮದ ಲಕ್ಷ್ಮೀ ಕೋಂ ಶ್ರೀನಿವಾಸ್ (ಹೆಸರು ಬದಲಾಯಿಸಲಾಗಿದೆ) ಇವರು ತಮ್ಮ ಮಗಳ ಮೇಲೆ ಆಗಿರುವ ಲೈಂಗಿಕ ಅತ್ಯಾಚಾರದ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಚನ್ನಗಿರಿ ಪೊಲೀಸ್ ಠಾಣೆಯ ತನಿಖಾಧಿಕಾರಿಯಾಗಿದ್ದ ಗಜೇಂದ್ರಪ್ಪ ಕೆ.ಎಸ್ ತನಿಖೆ ಕೈಗೊಂಡು ಆರೋಪಿ ವಿರುದ್ಧ ಅಪರಾಧಕ್ಕೆ ಸಂಬಂಧಿಸಿದಂತೆ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ದಾವಣಗೆರೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಶ್ರೀಪಾದ್ ಎನ್. ಸಲ್ಲಿಸಿದ ದೋಷಾರೋಪಣಾ ಪಟ್ಟಿಯ ಅನುಸಾರ ಸಂಪೂರ್ಣ ವಿಚಾರಣೆ ನಡೆಸಿದ್ದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಶಿಕ್ಷೆ ಮತ್ತು ರೂ. 15,000 ದಂಡ ವಿಧಿಸಿದ್ದಾರೆ. ದಂಡವನ್ನು ಪಾವತಿಸದೇ ಇದ್ದ ಪಕ್ಷದಲ್ಲಿ ಒಂದು ವರ್ಷಗಳ ಹೆಚ್ಚುವರಿ ಅವಧಿಗೆ ಆರೋಪಿಯನ್ನು ಕಾರಾಗೃಹ ವಾಸ ಅನುಭವಿಸುವಂತೆ ಆದೇಶ ನೀಡಿದ್ದಾರೆ.

ಸಂತ್ರಸ್ಥೆಗೆ ಪರಿಹಾರ ರೂಪದಲ್ಲಿ ರೂ.5,50,000 ಪರಿಹಾರ ನೀಡುವ ಸಲುವಾಗಿ ಜಿಲ್ಲಾ ಉಚಿತ ಸೇವಾ ಪ್ರಾಧಿಕಾರಕ್ಕೆ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಈ ಹಿಂದೆ ಅಭಿಯೋಜಕರಾಗಿದ್ದ ಶೌಕತ್ ಅಲಿ ಹಾಗೂ ಪ್ರಸ್ತುತ ವಿಶೇಷ ಸರ್ಕಾರಿ ಅಭಿಯೋಜಕಿ ರೇಖಾ ಎಸ್. ಕೋಟೆಗೌಡರ್ ಅವರು ಪೊಕ್ಸೋ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button