Breaking NewsLatestಮೆಟ್ರೋರಾಜಕೀಯರಾಜ್ಯಸುದ್ದಿ

ಸರ್ಕಾರ ಹಿಜಾಬ್-ಕೇಸರಿಶಾಲು ಪರವಾಗಿಲ್ಲ: ಸಚಿವ ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದದ ನಡುವೆಯೇ ರಾಜ್ಯ ಸರ್ಕಾರ ಹಿಜಾಬ್ ಅಥವಾ ಕೇಸರಿ ಶಾಲು ಇದರ ಪರವಾಗಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ವಿದ್ಯಾರ್ಥಿಗಳು ತಮಗೆ ಬೇಕಾದುದನ್ನು ಧರಿಸಬಹುದು. ಆದರೆ ಶಾಲೆಗಳಲ್ಲಿ ವಸ್ತ್ರ ಸಂಹಿತೆ(ಡ್ರೆಸ್ ಕೋಡ್) ಕಡ್ಡಾಯವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ಧಾರೆ.

ವಿದ್ಯಾರ್ಥಿಗಳ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮವಾಗಿ ಶಾಲೆ-ಕಾಲೇಜುಗಳನ್ನು ಮುಚ್ಚಲಾಗಿದೆ ಎಂದು ಹೇಳಿದ ಅಶೋಕ್, ಪ್ರಕರಣ ಸಂಬಂಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಈ ರಾಜಕೀಯದ ಹಿಂದೆ ಕಾಂಗ್ರೆಸ್ ಪಕ್ಷದ ಕೈವಾಡವಿದೆ ಎಂದು ಆರೋಪಿಸಿದರು.

ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಹಿಜಾಬ್ ವಿವಾದ ಕುರಿತು ವಿಸ್ತೃತ ಪ್ರಕ್ರಿಯೆ ನೀಡಲು ನಿರಾಕರಿಸಿದರು. ಈ ನಡುವೆ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಹಿಜಾಬ್ ವಿವಾದದ ಕುರಿತು ವಿಸ್ತೃತ ಚರ್ಚೆ ನಡೆದಿದೆ.

Spread the love

Related Articles

Leave a Reply

Your email address will not be published. Required fields are marked *

Back to top button