
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಕಿಚ್ಚು ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಶಾಲೆಗಳು ಮತ್ತು ಕಾಲೇಜು ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಈ ವಿವಾದ ತಡೆಯಲು ಶಾಲೆ ಮತ್ತು ಕಾಲೇಜಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಜೊತೆಗೆ ಇಂದು ಬೆಂಗಳೂರು ಪೊಲೀಸ್ ಆಯುಕ್ತ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಫೆ.22ರ ವರೆಗೂ 144 ಸೆಕ್ಷನ್ ಜಾರಿಯಲ್ಲಿ ಇರಲಿದೆ. ಶಾಲೆ ಮತ್ತು ಕಾಲೇಜಿನಲ್ಲಿ ಯಾರು ಗುಂಪು ಸೇರುವಂತಿಲ್ಲ ಎಂಬ ಸೂಚನೆ ನೀಡಲಾಗಿದ್ದು, ಯಾರಾದ್ರೂ ಗಲಾಟೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.



