
ನವದೆಹಲಿ: ಕರ್ನಾಟಕದಲ್ಲಿನ ಬೆಳವಣಿಗೆಗಳಿಗೆ ಸರ್ಕಾರ, ಮುಖ್ಯವಾಗಿ ಬಿಜೆಪಿ ಸದಸ್ಯರು ಜವಾಬ್ದಾರರು ಮತ್ತು ಈಗ ಚುನಾವಣೆ ನಡೆಯುತ್ತಿರುವುದರಿಂದ ಅವರು ಲಾಭ ಪಡೆಯಲು ಅವರು ಬಯಸುತ್ತಾರೆ ಎಂದು ರಾಜ್ಯ ಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ರಾಜ್ಯಸಭೆಯಲ್ಲಿ ಉಪಸ್ಥಿತರಿದ್ದರು, ನಾವು ಹಣದುಬ್ಬರ, ನಿರುದ್ಯೋಗ, ರೈತರು, ಜಿಡಿಪಿ, ರಾಷ್ಟ್ರೀಯ ಭದ್ರತೆ ಮತ್ತು ಏಕತೆಯ ಕುರಿತು ಸಮಸ್ಯೆಗಳನ್ನು ಎತ್ತಿದ್ದೆವು, ಆದರೆ ಪ್ರಧಾನಿಯವರು ವಿಷಯವನ್ನು ಬೇರೆಡೆಗೆ ತಿರುಗಿಸಿ ಕಾಂಗ್ರೆಸ್ ವಿರುದ್ಧ ನಿಂದನೆ ಮಾಡಿದ್ದಾರೆ. ಅವರು ಸಂಸತ್ತಿನ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದ್ದರಲ್ಲದೆ, ಚುನಾವಣಾ ಪ್ರಚಾರಗಳಲ್ಲಿ ಏನು ಮಾಡುತ್ತಾರೋ ಅದನ್ನೇ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗ ಚುನಾವಣೆ ನಡೆಯುತ್ತಿರುವುದರಿಂದ ಬಿಜೆಪಿಯವರು ಅದರ ಲಾಭ ಪಡೆಯಲು ವಿಪ್ರಯತ್ನಿಸುತ್ತಿದ್ದಾರೆ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ರಾಜಕೀಯ ಪಕ್ಷಗಳ ಮುಖಂಡರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತಲ್ಲೀನರಾಗಿದ್ದಾರೆ ಎಂದು ತಿಳಿಸಿದರು.
