Latestಜಿಲ್ಲಾ ಸುದ್ದಿಮೈಸೂರು

ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ; ಪೊಲೀಸ್ ಆಯುಕ್ತರ ಆದೇಶ

ಮೈಸೂರು:ನಗರದಲ್ಲಿ ಪ್ರತಿಭಟನೆ ಹಾಗೂ ಮೆರವಣಿಗೆಗಳನ್ನು ನಿಷೇಧಿಸಿ ಇಂದು 144 ಸೆಕ್ಷನ್ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.ಇಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು.

ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಳಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ಎಲ್ಲಾ ರೀತಿಯ ಮೆರವಣಿಗೆ ಹಾಗೂ ಪ್ರತಿಭಟನೆಗಳಿಗೆ ನಿರ್ಬಂಧ ಹೇರಲಾಗಿದೆ.ಈ ಆದೇಶ ಉಲ್ಲಂಘಿಸಿ ಯಾವುದೇ ಸಂಘಟನೆಯವರು ಪ್ರತಿಭಟನೆ ನಡೆಸಲು ಮುಂದಾದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಎಚ್ಚರಿಕೆ ನೀಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button