Breaking NewsLatestರಾಷ್ಟ್ರೀಯವಾಣಿಜ್ಯಸುದ್ದಿ

Rahul Bajaj : ಬಜಾಜ್ ಗ್ರೂಪ್​​​​ನ​​​​​​​​​​ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ ನಿಧನ

ನವದೆಹಲಿ : ಖ್ಯಾತ ಉದ್ಯಮಿ, ಬಜಾಜ್ ಗ್ರೂಪ್​​​​ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ (83 ವರ್ಷ) ಇಂದು ಪುಣೆಯಲ್ಲಿ ನಿಧನರಾಗಿದ್ದಾರೆ. ರಾಹುಲ್ ಬಜಾಜ್ ಅವರಿಗೆ ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆ ಇತ್ತು. ಕಳೆದ ಒಂದು ತಿಂಗಳಿನಿಂದ ರಾಹುಲ್ ಬಜಾಜ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

1938ರ ಜೂನ್ 10ರಂದು ಜನಿಸಿದ ರಾಹುಲ್ ಬಜಾಜ್ ಅವರು 40 ವರ್ಷಗಳ ಕಾಲ ಬಜಾಜ್ ಗ್ರೂಪ್‌ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ರಾಹುಲ್ ಬಜಾಜ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಬಜಾಜ್ ಆಟೋ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಸ್ತುತ ಬಜಾಜ್ ಸಂಸ್ಥೆಯ ಎಮೆರಿಟಸ್ ಅಧ್ಯಕ್ಷರಾಗಿದ್ದರು.

ರಾಹುಲ್ ಬಜಾಜ್ ಅಬರ ಪಾರ್ಥೀವ ಶರೀರವನ್ನು ರೂಬಿ ಹಾಲ್‌ನಿಂದ ಶೀಘ್ರ ನಿವಾಸಕ್ಕೆ ಕೊಂಡೊಯ್ಯಲಾಗುತ್ತದೆ, ಫೆ.13ರಂದು ಬೆಳಗ್ಗೆ 11 ಗಂಟೆಗೆ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಸಂಜೆ 4 ಗಂಟೆಗೆ ಪುಣೆಯ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Spread the love

Related Articles

Leave a Reply

Your email address will not be published. Required fields are marked *

Back to top button