Breaking NewsLatestಮನರಂಜನೆಸಿನಿಮಾಸೆಲೆಬ್ರಿಟಿ

ಕನ್ನಡದ ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ: ವೆಂಟಿಲೇಟರ್​ನಲ್ಲಿ ಚಿಕಿತ್ಸೆ

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರನ್ನ ಬೆಂಗಳೂರಿನ ಕಸ್ತೂರಬಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 89 ವರ್ಷ ವಯಸ್ಸಿನ ರಾಜೇಶ್ ಅವರು ಕಿಡ್ನಿ ವೈಫಲ್ಯ ಹಾಗೂ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು ವೆಂಟಿಲೇಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಜನಸಿದ ರಾಜೇಶ್ ಅವರ ಮೂಲ ಹೆಸರು ಮುನಿ ಚೌಡಪ್ಪ. ಬಣ್ಣದ ಲೋಕದತ್ತ ಆಸಕ್ತಿ ಹೊಂದಿದ್ದ ರಾಜೇಶ್ ನಾಟಕಗಳಲ್ಲಿ ಅಭಿನಯಿಸುವಾಗ ವಿದ್ಯಾಸಾಗರ್ ಎಂಬ ಹೆಸರಿನಿಂದಲೇ ಗುರುತಿಸಿಕೊಂಡಿದ್ದರು. ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಬಳಿಕ ಕಲಾತಪಸ್ವಿ ರಾಜೇಶ್ ಎಂದೇ ಖ್ಯಾತಿ ಘಳಿಸಿದರು.

1960ರ ದಶಕದಲ್ಲಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರಾಜೇಶ್ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ರು. ಡಾ.ರಾಜ್​ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್​ರಂಥಹ ಘಟಾನುಘಟಿ ಕಲಾವಿದರ ಜೊತೆ ನಟಿಸಿ ತಮ್ಮದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡ ಕಲಾವಿದ ರಾಜೇಶ್.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜೇಶ್ ಸಾಕಷ್ಟು ವರ್ಷಗಳಿಂದ ಸಿನಿಮಾ ರಂಗದಿಂದ ದೂರವೇ ಉಳಿದಿದ್ರು. ಆದ್ರೆ ಇತ್ತೀಚೆಗೆ ಎಂ.ಜಿ.ಶ್ರೀನಿವಾಸ್ ನಿರ್ದೇಶನದ ಓಲ್ಡ್ ಮಂಕ್ ಚಿತ್ರದ ಪ್ರಮುಖ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದರು. ಸದ್ಯ ರಾಜೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಅಂತಿದ್ದಾರೆ ಅಭಿಮಾನಿಗಳು.

Spread the love

Related Articles

Leave a Reply

Your email address will not be published. Required fields are marked *

Back to top button