
ಬೆಂಗಳೂರು: ರಾಜ್ಯದಲ್ಲಿ ಭುಗಿಲೆದಿದ್ದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದಿಂದ ಬಂದ್ ಆಗಿದ್ದ ಶಾಲೆ ಇಂದಿನಿಂದ ಮತ್ತೆ ಶುರುವಾಗಿದೆ. ಬಿಗಿ ಭದ್ರತೆಯಲ್ಲಿ ಇಂದಿನಿಂದ 9 ಮತ್ತು 10 ನೇ ತರಗತಿ ಆರಂಭವಾಗಿದೆ. ಹಿಜಾಬ್ ಕಿಚ್ಚುನಿಂದಾಗಿ ಸರ್ಕಾರ ಶಾಲೆಗಳಿಗೆ ನಾಲ್ಕು ದಿನ ರಜೆ ನೀಡಿತ್ತು.
ಶಾಲಾ ಆವರಣದಲ್ಲಿ ಸಮವಸ್ತ್ರ ಕಡ್ಡಾಯ ಮಾಡಿಯೇ ಶಾಲೆ ಆರಂಭಿಸಬೇಕು. ಯಾವುದೇ ಕಾರಣಕ್ಕೂ ಶಾಲೆಗಳಲ್ಲಿ ಶಾಂತಿ ಹದಗೆಡದ್ದಂತೆ ನೋಡಿಕೊಳ್ಳಿ. ಕೆಲವು ದಿನಗಳ ಮಟ್ಟಿಗೆ ಯಾವುದೇ ವಿದ್ಯಾರ್ಥಿಗಳ ಕಾರ್ಯಕ್ರಮ ಅವಕಾಶ ಬೇಡ. ಸಾಂಸ್ಕೃತಿಕ ಕಾರ್ಯಕ್ರಮ ಬ್ರೇಕ್ ಹಾಕಿ ಕೇವಲ ತರಗತಿ ಮಾತ್ರ ಮಾಡಬೇಕು ಎಂದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿತ್ತು.
ಇನ್ನು ಹಿಜಾಬ್ ವಿವಾದ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2.30ಕ್ಕೆ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.ಹೀಗಾಗಿ ಈ ತೀರ್ಪಿಗಾಗಿ ಇಡೀ ರಾಜ್ಯವೇ ಕಾದು ಕುಳಿತಿದೆ.



