Breaking NewsLatestಜಿಲ್ಲಾ ಸುದ್ದಿಮೆಟ್ರೋರಾಜಕೀಯರಾಜ್ಯಸುದ್ದಿ
ಉಚ್ಚ ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು: ಸಿಎಂ ಬೊಮ್ಮಾಯಿ

ಬೆಂಗಳೂರು: ಉಚ್ಚ ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು 10ನೇ ತರಗತಿಯವರೆಗೆ ಶಾಲೆಗಳು ಪ್ರಾರಂಭವಾಗಿದ್ದು ಕೆಲವು ಜಿಲ್ಲೆಗಳಲ್ಲಿ ಬೇರೆ ಬೇರೆ ಪ್ರಕರಣಗಳು ವರದಿಯಾಗಿವೆ. ನೂನ್ಯತೆಗಳನ್ನು ಸರಿಪಡಿಸುವ ಕುರಿತು ಹಾಗೂ ಎಸ್.ಒ.ಪಿಗಳ ಬಗ್ಗೆಸಭೆ ಕರೆದು ಚರ್ಚಿಸಲಾಗುವುದು ಎಂದರು.
ಸೋಮವಾರ ಅವರು, ಕಲಾಪ ಸಲಹಾ ಸಮಿತಿ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಉಚ್ಛ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡುವ ಹೊಣೆಗಾರಿಕೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಪೋಷಕರ ಮೇಲಿದೆ. ಶಾಂತಿಯುತ ವಾತಾವರಣದಲ್ಲಿ ಅಂತಿಮ ತೀರ್ಪು ನೀಡಲು ಸಾಧ್ಯವಾಗಲಿದೆ. ಅಲ್ಲಿಯವರೆಗೆ ನಾವು ನಿಯಂತ್ರಣದಲ್ಲಿರಬೇಕು ಎಂದರು.
