
ಬೆಂಗಳೂರು: ಬುಧವಾರದಿಂದ ಪಿಯು, ಡಿಗ್ರಿ ಕಾಲೇಜು ಆರಂಭಿಸಲಾಗುತ್ತಿದೆ. ಹೈಕೋರ್ಟ್ ಆದೇಶ ಪಾಲಿಸಿ ಕಾಲೇಜು ಆರಂಭಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ನಾಗೇಶ್ ಹೇಳಿಕೆ ನೀಡಿದ್ದಾರೆ.
ಈ ಕುರಿತು ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಿತು. ಆ ಸಭೆ ಬಳಿಕ ಶಿಕ್ಷಣ ಸಚಿವ ನಾಗೇಶ್ ಮಾತನಾಡಿದರು. ಮೂರು ದಿನಗಳ ರಜೆಯ ಬಳಿಕ ಸೋಮವಾರದಿಂದ ಹೈಸ್ಕೂಲ್ ತರಗತಿಗಳನ್ನು ಪುನಾರಂಭ ಮಾಡಲಾಗಿತ್ತು. ಮುಂದುವರಿದು ನಂತರದ ತರಗತಿಗಳನ್ನು ಕೂಡ ಆರಂಭಿಸಲು ಸರ್ಕಾರ ಮುಂದಾಗಿದೆ.



