Latestಮನರಂಜನೆಸಿನಿಮಾಸೆಲೆಬ್ರಿಟಿ
ಮಲಯಾಳಂನ ನಟ ಕೊಟ್ಟಾಯಂ ಪ್ರದೀಪ್ ನಿಧನ

ತಿರುವನಂತಪುರಂ: ಮಲಯಾಳಂನ ಖ್ಯಾತ ನಟ ಕೊಟ್ಟಾಯಂ ಪ್ರದೀಪ್ ಎಂದೇ ಫೇಮಸ್ ಆಗಿರುವ ಪ್ರದೀಪ್ ಕೆ. ಆರ್ ಹೃದಯಾಘಾತದಿಂದ ನಿಧನಹೊಂದಿದ್ದಾರೆ.
ಪ್ರದೀಪ್ ಅವರು ಕೊಟ್ಟಾಯಂ ಎಂಬ ಸ್ಥಳದ ಹೆಸರುನ್ನು ಸೇರಿಸಿಕೊಂಡಿದ್ದರು. ಇಂದು ಬೆಳಗ್ಗೆ ಪ್ರದೀಪ್ ಅವರಿಗೆ ಆರೋಗ್ಯ ಸಮಸ್ಯೆ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇನ್ನು ಪ್ರದೀಪ್ ಅವರು ಚಿಕ್ಕ ವಯಸ್ಸಿನಲ್ಲಿಯೇ ನಟನೆ ಬಗ್ಗೆ ಆಸಕ್ತಿ ಹೊಂದಿದ್ದರು. ಹೀಗಾಗಿ ಅವರು ಶಾಲೆಯಲ್ಲಿ ನಡೆಯವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರು. ಅವರು ಎನ್ಎನ್ ಪಿಳ್ಳೈ ಅವರ ನಾಟಕದಲ್ಲಿ ಬಾಲ ಕಲಾವಿದರಾಗಿ ನಟನಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದರು.



