Breaking NewsLatestರಾಷ್ಟ್ರೀಯಸುದ್ದಿ

India Covid Updates: ದೇಶದಲ್ಲಿ ಇಂದು 19 ಸಾವಿರ ಕೊರೊನಾ ಕೇಸ್ ಪತ್ತೆ

ನವದೆಹಲಿ : ದೇಶದಲ್ಲಿ  ದಿನದಿಂದ ದಿನಕ್ಕೆ ಕೋವಿಡ್​​ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಇಂದು 19,968 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಸಂದರ್ಭದಲ್ಲಿ 673 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಕೊರೊನಾ ಪ್ರಕರಣಗಳ ಒಟ್ಟು ಸಂಖ್ಯೆ 4,28,22,473ಕ್ಕೆ ಏರಿಕೆಯಾಗಿದೆ. ಅಲ್ಲದೇ ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 5,11,903ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,24,187ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 48,847 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,20,86,383ಕ್ಕೆ ತಲುಪಿದೆ.

Spread the love

Related Articles

Leave a Reply

Your email address will not be published. Required fields are marked *

Back to top button