Breaking NewsLatestಮೆಟ್ರೋರಾಜಕೀಯರಾಜ್ಯಸುದ್ದಿ

Congress Protest : ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆಕೊಟ್ಟ ಕಾಂಗ್ರೆಸ್

ಬೆಂಗಳೂರು : ಸಚಿವ ಕೆ ಎಸ್ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾಧ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ನಾಳೆ ರಾಜ್ಯದ ಎಲ್ಲಾ ತಾಲೂಕು ಕೇಂದ್ರ ಹಾಗೂ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕುವಂತೆ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಕರೆ ಕೊಟ್ಟಿದ್ದಾರೆ.

ಅಹೋರಾತ್ರಿ ಧರಣಿಗೆ ರಾಜ್ಯ ಸರ್ಕಾರ ಮಣಿಯುವ ಸೂಚನೆಯಿಲ್ಲ. ನಾಳೆ ಅಧಿವೇಶನದಲ್ಲಿ ಕಾಂಗ್ರೆಸ್ ಧರಣಿ ಮುಂದುವರೆಸಲಿದೆ. ಇದೇ ಸಂದರ್ಭದಲ್ಲಿ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಕೇಸರಿ ಬಾವುಟ ಮುಂದೊಂದು ದಿನ ರಾಷ್ಟ್ರಧ್ವಜ ಮಾಡಬಹುದು ಎಂದು ಸಚಿವ ಈಶ್ವರಪ್ಪ ಅವರು ನೀಡಿರುವ ಹೇಳಿಕೆ ರಾಷ್ಟ್ರಧ್ವಜಕ್ಕೆ ಮಾಡಿರುವ ಅಪಮಾನ. ಪ್ರಜಾಪ್ರಭುತ್ವ ದೇಶದಲ್ಲಿ ದೇಶದ ಸ್ವಾಭಿಮಾನಕ್ಕೆ ಧಕ್ಕೆಯಾಗುವಂತೆ ಹೇಳಿಕೆ ನೀಡಿದ್ದಾರೆ. ದೇಶದ ಸ್ವಾಭಿಮಾನ ಉಳಿಸಬೇಕಾಗಿದೆ. ಆ ನಿಟ್ಟಿನಲ್ಲಿ ಸಚಿವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಿಸಲ್ಲ ಎಂದು ಹೇಳಿದರು.

ಅತ್ತ ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಧರಣಿ ವಿಚಾರಕ್ಕೆ ಸಂಬಂಧಿಸಿ ಬೆಳವಣಿಯನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಹೈಕಮಾಂಡ್ ನಾಳೆ ಬೆಂಗಳೂರಿನಲ್ಲಿ ಬಿಜೆಪಿ ತುರ್ತು ಸಭೆ ನಡೆಸಲು ತೀರ್ಮಾನಿಸಿದೆ.

Spread the love

Related Articles

Leave a Reply

Your email address will not be published. Required fields are marked *

Back to top button