Breaking NewsLatestಜಿಲ್ಲಾ ಸುದ್ದಿಮೆಟ್ರೋರಾಜ್ಯಶಿಕ್ಷಣಸುದ್ದಿ

ಪ್ರಾಯೋಗಿಕ ಪರೀಕ್ಷೆಗೆ ಗೈರಾದರೆ ಮತ್ತೆ ಅವಕಾಶ ಇಲ್ಲ, ಶಿಕ್ಷಣ ಇಲಾಖೆ ಸುತ್ತೋಲೆ

Practical Exams: ಬೆಂಗಳೂರು: ರಾಜ್ಯಾದ್ಯಂತ ವ್ಯಾಪಿಸಿರುವ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಪ್ರಾಯೋಗಿಕ ಪರೀಕ್ಷೆಗಳಿಗೆ ಗೈರಾದರೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿ ಪ್ರವೇಶ ನಿರ್ಬಂಧಿಸಿರುವ ಬೆನ್ನಲ್ಲೇ ಈ ಸೂಚನೆ ಹೊರಬಿದ್ದಿದೆ. ಪ್ರಾಯೋಗಿಕ ಪರೀಕ್ಷೆಗಳಿಗೆ ಈಗಾಗಲೇ ಚಾಲನೆ ಸಿಕ್ಕಿದೆ. ಇದರ ನಡುವೆ ಶಿಕ್ಷಣ ಇಲಾಖೆಯ ಈ ಆದೇಶ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರು ಇಕ್ಕಟ್ಟಿಕೆ ಸಿಲುಕಿಸುವಂತಾಗಿದೆ.

ಕಳೆದ ಫೆ.17ರಿಂದ ಪ್ರಾಯೋಗಿಕ ಪರಿಕ್ಷೇಗಳು ಆರಂಭವಾಗಿವೆ. ಹಲವು ಜಿಲ್ಲೆಗಳಲ್ಲಿ ನಾಳೆ ಸೋಮವಾರದಿಂದ ಪರೀಕ್ಷೆಗಳು ಆರಂಭವಾಗಲಿವೆ. ಸರ್ಕಾರದ ಆದೇಶ ಪಾಲಿಸಿ ತರಗತಿಗೆ ಹಾಜರಾದರೆ ಯಾವುದೇ ತೊಂದರೆ ಇಲ್ಲ. ಆದರೆ ಆದೇಶದ ವಿರುದ್ಧ ತರಗತಿ ಮತ್ತು ಪರೀಕ್ಷೆಗೆ ಗೈರು ಹಾಜರಾದರೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.  

Spread the love

Related Articles

Leave a Reply

Your email address will not be published. Required fields are marked *

Back to top button