Pratap Simha : ಮುಖ್ಯಮಂತ್ರಿಗಳು ಮಾತು ನಿಲ್ಲಿಸಿ ಕೃತಿಯಲ್ಲಿ ಕಠಿಣತೆ ತೋರಲಿ: ಪ್ರತಾಪ್ ಸಿಂಹ

ಮೈಸೂರು: ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಬೀದಿಯಲ್ಲಿ ಕೊಲೆಯಾಗಿದೆ. ಇದು ನನಗೆ ಅತೀವ ನೋವು ತಂದಿದೆ. ಸಿಎಂ ಬಸವರಾಜ ಬೊಮ್ಮಾಯಿ ಮಾತು ನಿಲ್ಲಿಸಿ ಕೃತಿಯಲ್ಲಿ ಕಠಿಣತೆ ತೋರಲಿ ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ಗೃಹ ಸಚಿವರಾಗಿದ್ದಾಗಲೇ ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ನಡೆಯಿತು. ಈಗ ಅವರೇ ಸಿಎಂ. ಆಗಲೇ ಎಸ್ಡಿಪಿಐ, ಪಿಎಫ್ಐ ಸಂಘಟನೆಗಳ ಮೇಲೆ ಕ್ರಮ ತಗೊಂಡಿದ್ರೆ ಈ ಹತ್ಯೆ ನಡೆಯುತ್ತಿರಲಿಲ್ಲ ಎಂದು ತಿಳಿಸಿದರು.
ನಮ್ಮ ಸರ್ಕಾರ ಬಂದ ಮೇಲೂ ಹಿಂದೂ ಕಾರ್ಯಕರ್ತನ ಕೊಲೆ ಆಗಿರೋದು ನನಗೆ ನಾಚಿಕೆ ತರುತ್ತಿದೆ. ಕಾಂಗ್ರೆಸ್ ಅವಧಿಯಲ್ಲಿ ಹತ್ಯೆಗಳು ನಡೆದಾಗಲು ಸಿದ್ದರಾಮಯ್ಯರ ಅವರನ್ನು ಬೈತಿದ್ವಿ. ಆದರೆ ಇವತ್ತು ನಮ್ಮದೇ ಸರ್ಕಾರ ಇದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್ನಲ್ಲಿ ಅತ್ಯಾಚಾರ ಆದಾಗ ಅಪರಾಧಿಗಳನ್ನು ಗುಂಡಿಕ್ಕಿ ಕೊಂದಿದ್ದರು. ಅದೇ ರೀತಿ ಇಲ್ಲೂ ಕ್ರಮ ಕೈಗೊಂಡ್ರೆ ಪಾಠ ಕಲಿಯುತ್ತಾರೆ ಎಂದು ರಾಜ್ಯ ಸರ್ಕಾರಕ್ಕೆ ಪ್ರತಾಪ್ ಸಿಂಹ ಆಗ್ರಹಿಸಿದರು
