Breaking NewsLatestರಾಷ್ಟ್ರೀಯಸುದ್ದಿ
India Covid Updates: ದೇಶದಲ್ಲಿ ಇಂದು 14 ಸಾವಿರ ಕೊರೊನಾ ಕೇಸ್ ಪತ್ತೆ

ನವದೆಹಲಿ : ದಿನದಿಂದ ದಿನಕ್ಕೆ ಕೊರೊನಾ ಕೊರೊನಾ ಹಾವಳಿ ಕಡಿಮೆಯಾಗುತ್ತಿದೆ. ದೇಶದಲ್ಲಿ ಇಂದು 14,148 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಸಂದರ್ಭದಲ್ಲಿ 302 ಮಂದಿ ಸಾವನ್ನಪ್ಪಿದ್ದಾರೆ.
ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,28,81,179ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 5,12,924ಕ್ಕೆ ಏರಿಕೆಯಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 1,48,359ಕ್ಕೆ ತಲುಪಿದೆ.30,009 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,22,19,896ಕ್ಕೆ ತಲುಪಿದೆ.
