ಬಿಎಸ್ವೈ ಹುಟ್ಟುಹಬ್ಬ ಹಿನ್ನೆಲೆ ರೈತರಿಗೆ ಉಚಿತ ಟ್ರ್ಯಾಕ್ಟರ್ ವಿತರಣೆ

ಬೆಂಗಳೂರು:ಇಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಜಯ್ ನಗರದಲ್ಲಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯಲ್ಲಿ ಬಿಡಿಎ ಅಧ್ಯಕ್ಷ ವಿಶ್ವನಾಥ್, ಎಂಎಲ್ಸಿ ನಾರಾಯಣಸ್ವಾಮಿ ಸೇರಿದಂತೆ ಕೆಲವು ಮಂದಿ ಭಾಗಿಯಾಗಿದ್ರು. ಜೊತೆಗೆ ಬಿಎಸ್ವೈ ಬರ್ತಡೇ ಹಿನ್ನೆಲೆ ಬೆಂಗಳೂರಿನ ಅಣ್ಣಮ್ಮ ದೇವಿ ದೇವಸ್ಥಾನದಲ್ಲಿ ಯಡಿಯೂರಪ್ಪ ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕುಮಾರಕೃಪ ರಸ್ತೆಯಲ್ಲಿರುವ ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ಬಿಎಸ್ವೈ ರೈತರಿಗೆ ಉಚಿತ ಟ್ರ್ಯಾಕ್ಟರ್ಗಳನ್ನ ವಿತರಣೆ ಮಾಡಿದ್ರು. ಮತ್ತೊಂದೆಡೆ ಸಚಿವ ಕೆ.ಗೋಪಾಲಯ್ಯ, ಸಂಸದ ಡಿ.ವಿ.ಸದಾನಂದಗೌಡ ನಂದಿನಿ ಬಡಾವಣೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ವಿಕಲ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ ಮಾಡಿದ್ದಾರೆ. ಬಿಎಸ್ವೈ ಅವರಿಗೆ ಸಚಿವರಾದ ಎಸ್.ಟಿ.ಸೋಮಶೇಖರ್, ಕೆ.ಗೋಪಾಲಯ್ಯ, ಭೈರತಿ ಬಸವರಾಜ್, ಎಸ್.ಆರ್. ವಿಶ್ವನಾಥ್ ಪುತ್ರರಾದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ ಶುಭ ಹಾರೈಸಿದರು.
