Breaking NewsLatestಜಿಲ್ಲಾ ಸುದ್ದಿರಾಜ್ಯರಾಮನಗರಸುದ್ದಿ
ಮೇಕೆದಾಟು ಪಾದಯಾತ್ರೆ: ಕಾಂಗ್ರೆಸ್ ನಾಯಕರ ವಿರುದ್ಧ FIR ದಾಖಲು

ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಯುತ್ತಿದೆ. ಈ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ.
ರಾಮನಗರದ ಐಜೂರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಎ1 ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎ2 ವಿಪಕ್ಷ ನಾಯಕ ಸಿದ್ದರಾಮಯ್ಯ, ಎ3 ಡಿ.ಕೆ. ಸುರೇಶ್, ಎ4 ಎಂಎಲ್ಸಿ ಎಸ್. ರವಿ ಸೇರಿ 37 ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಕಾಂಗ್ರೆಸ್ ನಾಯಕರ ಪಾದಯಾತ್ರೆ ಕೊರೊನಾ ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಮತ್ತೆ ನಿನ್ನೆಯಿಂದ ಆರಂಭವಾಗಿತ್ತು. ರಾಮನಗರದಲ್ಲಿ ನಿಂತಿದ್ದ ಮೇಕೆದಾಟು ಪಾದಯಾತ್ರೆ 2.O ಕ್ಕೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ 3 ನೇ ತಾರೀಕು ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನ ತಲುಪಲಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಪಾದಯಾತ್ರೆ ಸಾಗುತ್ತಿದೆ.
