Breaking NewsLatestಜಿಲ್ಲಾ ಸುದ್ದಿದಾವಣಗೆರೆ

ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ಯಾವ ಪುರುಷಾರ್ಥಕ್ಕೆ : ಅಶೋಕ್ ಪ್ರಶ್ನೆ

ದಾವಣಗೆರೆ: ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಕಂದಾಯ ಸಚಿವ ಆರ್. ಅಶೋಕ್ ಅವರು ಕಾಂಗ್ರೆಸ್ ಗೆ ಕೆಟ್ಟ ಕಾಲ ಶುರುವಾಗಿದೆ ಎಂದು ಹೇಳಿದ್ದಾರೆ.

ಹೊನ್ನಾಳಿ ಪಟ್ಟಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಹಿಂದೆ ಮೇಕೆದಾಟು ಪಾದಯಾತ್ರೆ ಆರಂಭ ಮಾಡಿ ಕೋವಿಡ್ ಹಿನ್ನೆಲೆ ಅರ್ಧಕ್ಕೆ ನಿಂತು ಹೊಯಿತು. ಈಗ ಉಕ್ರೇನ್ ನಲ್ಲಿ ನಮ್ಮ ಮಕ್ಕಳ ಸಂಕಷ್ಟದಲ್ಲಿ ಇದ್ದಾರೆ. ಕಾಂಗ್ರೆಸ್ ನವರು ಬಿರಿಯಾನಿ ತಿನ್ನುತ್ತಾ ಜೊತೆಗೆ ಡಾನ್ಸ್ ಮಾಡುತ್ತಾ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮೇಕೆದಾಟು ವಿಚಾರ ಕೋರ್ಟ್ ನಲ್ಲಿ ಇದೆ. ಈ ವಿಚಾರವನ್ನು ಸೂಕ್ಷ್ಮವಾಗಿ ಬಗೆಹರಿಸಬೇಕು. ಕಾಂಗ್ರೆಸ್ ಪಾದಯಾತ್ರೆಯಿಂದ ತಮಿಳುನಾಡು ಕೈಗೆ ಅಸ್ತ್ರ ಕೊಟ್ಟಂತಾಗುತ್ತದೆ. ಈ ಹಿಂದೆ ಎಸ್ ಎಂ ಕೃಷ್ಣ ಅವರು ಸಿಎಂ ಆಗಿದ್ದಾಗ ಕಾವೇರಿ ವಿಚಾರದಲ್ಲಿ ಪಾದಯಾತ್ರೆ ಮಾಡಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತು. ಆಗ ಕೋರ್ಟ್ ಛೀಮಾರಿ ಹಾಕಿತ್ತು. ಮೇಕೆದಾಟು ಅಂದ್ರೆ ಕುಡಿಯುವ ನೀರು ಅಂತಾ. ಆದ್ರೆ ಇವರು ನೀರಾವರಿಗೂ ಕೊಡುವುದಾಗಿ ಹೇಳುತ್ತಿದ್ದಾರೆ‌. ಇಷ್ಟಕ್ಕೂ ಇವರ ಮಾತು ಕೇಂದ್ರ, ರಾಜ್ಯ ಸರ್ಕಾರಗಳು ಕೇಳುತ್ತಿಲ್ಲ. ಯಾವ ಪುರುಷಾರ್ಥಕ್ಕೆ ಈ ಯಾತ್ರೆ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಪ್ರಭಾವಿನಾ, ಡಿ. ಕೆ. ಶಿವಕುಮಾರ್ ಪ್ರಭಾವಿನಾ ಎಂಬ ಸ್ಪರ್ಧೆ ಕಾಂಗ್ರೆಸ್ ನಲ್ಲಿ ನಡೆಯುತ್ತಿದೆ. ಮೀಡಿಯಾ ಜೊತೆಗೆ ಪ್ರಚಾರದಲ್ಲಿ ಈಗ ಡಿಕೆಶಿ ಮಾತ್ರ ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು.

Spread the love

Related Articles

Leave a Reply

Your email address will not be published. Required fields are marked *

Back to top button