Breaking NewsLatestರಾಷ್ಟ್ರೀಯಸುದ್ದಿ
India Covid Updates : ದೇಶದಲ್ಲಿ ಇಂದು 6915 ಕೊರೊನಾ ಕೇಸ್ ಪತ್ತೆ

ನವದೆಹಲಿ : ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಇಳಿಕೆಯಾಗಿದ್ದು, ದೇಶದಲ್ಲಿ ಇಂದು 6,915 ಕೋವಿಡ್ ಕೇಸ್ಗಳು ಪತ್ತೆಯಾಗಿದ್ದು, ಇದೇ ಸಂದರ್ಭದಲ್ಲಿ 180 ಮಂದಿ ಸಾವನ್ನಪ್ಪಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,29,31,045ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,13,843ಕ್ಕೆ ಏರಿಕೆಯಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 92,472ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 16,864 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,23,24,550ಕ್ಕೆ ತಲುಪಿದೆ.
