Breaking NewsLatestಜಿಲ್ಲಾ ಸುದ್ದಿಮೈಸೂರು

ಉಕ್ರೇನ್​​​ನಲ್ಲಿ‌ರುವ ಮೈಸೂರು ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕುತ್ತಿದ್ದೇವೆ

ಮೈಸೂರು: ಉಕ್ರೇನ್​​​​ನಲ್ಲಿ ಸಿಲುಕಿರುವ ಮೈಸೂರು ಜಿಲ್ಲೆಯ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಉಕ್ರೇನ್​​ನಲ್ಲಿರುವ ಮೈಸೂರು ವಿದ್ಯಾರ್ಥಿಗಳ ಮಾಹಿತಿಯನ್ನು ಕಲೆ ಹಾಕಲಾಗುತ್ತಿದ್ದು, ಎಷ್ಟು ವಿದ್ಯಾರ್ಥಿಗಳು ಸಿಲುಕಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್​​ರಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ತಿಳಿಸಿದರು.

ನಗರದ ಮೃಗಾಲಯಕ್ಕೆ ಹೊರಭಾಗದ ಪಾರ್ಕಿಂಗ್ ಸ್ಥಳದಿಂದ ಮೃಗಾಲಯದೊಳಗಿನ ಟಿಕೆಟ್ ಕೌಂಟರ್‌ವರೆಗೂ ನಿರ್ಮಾಣವಾಗಿರುವ ಅಂಡರ್‌ಪಾಸ್​ ಉದ್ಘಾಟನೆ ಮಾಡಿದರು. ಮೃಗಾಲಯದ ಮುಂಭಾಗದ ರಸ್ತೆ ದಾಟಲು ಪ್ರವಾಸಿಗರಿಗೆ ತೊಂದರೆಯಾದ ಹಿನ್ನೆಲೆಯಲ್ಲಿ ಈ ಸುರಂಗ ಮಾರ್ಗ ನಿರ್ಮಾಣ ಮಾಡಲಾಗಿದೆ ಎಂದರು.

Spread the love

Related Articles

Leave a Reply

Your email address will not be published. Required fields are marked *

Back to top button