Breaking NewsLatestಜಿಲ್ಲಾ ಸುದ್ದಿರಾಜ್ಯಸುದ್ದಿ

ಹುಚ್ಚು ನಾಯಿ ದಾಳಿ 30 ಕ್ಕೂ ಹೆಚ್ಚು ಮಂದಿಗೆ ಗಾಯ

ಮೈಸೂರು ; ರಸ್ತೆಯಲ್ಲಿ ತೆರಳುತ್ತಿದ್ದ ಪಾದಚಾರಿಗಳ ಮೇಲೆ ಹುಚ್ಚು ನಾಯಿಗಳು ದಾಳಿ ನಡೆಸಿ 30ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಹುಣಸೂರು ನಗರದ ಕಲ್ಪತರು ವೃತ್ತದ ಬಳಿ ಜನರು ತೆರಳುತ್ತಿದ್ದಾಗ ಹುಚ್ಚು ನಾಯಿಗಳು ಹಠಾತ್ತನೆ ದಾಳಿ ಮಾಡಿ 30 ಕ್ಕೂ ಹೆಚ್ಚು ಜನರಿಗೆ ಕಚ್ಚಿವೆ. ಹುಚ್ಚುನಾಯಿ ಕಡಿತಕ್ಕೆ ಒಳಗಾದ ಹಲವು ಮಂದಿ ಹುಣಸೂರು ಸಾರ್ವಜನಿಕ ಆಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.

ಕೆಲ ಶಾಲಾ ಮಕ್ಕಳು ಸೇರಿದಂತೆ ಇನ್ನೂ 18 ಮಂದಿ ಒಳ ರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ವೃದ್ಧ ಮಹಿಳೆ ಸೇರದಂತೆ 9 ಮಂದಿಯನ್ನ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಹುಚ್ಚು ನಾಯಿಗಳ ಕಾಟದಿಂದ ಸಾರ್ವಜನಿಕರು ರಸ್ತೆ ಮೇಲೆ ಓಡಾಡಲು ಭಯ ಪಡುತ್ತಿದ್ದು, ಕೂಡಲೇ ಸಂಬಂಧ ಪಟ್ಟ ಇಲಾಖೆ ತಕ್ಷಣ ನಾಯಿಗಳ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button