Breaking NewsLatestವಿದೇಶಸುದ್ದಿ
ಉಕ್ರೇನ್ನ ಅತೀ ದೊಡ್ಡ ಅಣುಸ್ಥಾವರದ ಮೇಲೆ ರಷ್ಯಾ ದಾಳಿ

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ವಾರ ಕಳೆದಿದ್ದು ಯುದ್ಧ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾ ಉಕ್ರೇನ್ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸುತ್ತಲೇ ಇದೆ. ಇದೀಗ ಯುರೋಪ್ನಲ್ಲಿಯೇ ಅತಿ ದೊಡ್ಡದಾದ ಉಕ್ರೇನ್ನಲ್ಲಿರುವ ಝಪೊರಿಝಿಯಾ ಪರಮಾಣು ವಿದ್ಯುತ್ ಸ್ಥಾವರವನ್ನ ರಷ್ಯಾ ಸೈನಿಕರು ಉಡೀಸ್ ಮಾಡಿದ್ದಾರೆ.
ಯುರೋಪ್ನಲ್ಲಿಯೇ ಅತಿ ದೊಡ್ಡದಾದ ಉಕ್ರೇನ್ನಲ್ಲಿರುವ ಝಪೊರಿಝಿಯಾ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶುಕ್ರವಾರ ಮುಂಜಾನೆ 3 ಗಂಟೆ ಸುಮಾರಿಗೆ ರಷ್ಯಾ ಸೈನಿಕರಿಂದ ಝಪೊರಿಝಿಯಾ ಅಣುಸ್ಥಾಪವರದ ಮೇಲೆ ದಾಳಿ ನಡೆದಿದೆ. ಉಕ್ರೇನ್ ವಿದೇಶಾಂಗ ಸಚಿವ ದಾಳಿ ಕುರಿತಂತೆ ಕಳವಳ ವ್ಯಕ್ತಪಡಿಸಿದ್ದಾರೆ.
