Breaking NewsLatestಜಿಲ್ಲಾ ಸುದ್ದಿದಾವಣಗೆರೆರಾಜ್ಯಸುದ್ದಿ

ಮನೆ ಬಾಗಿಲಿಗೆ ಕಂದಾಯ ದಾಖಲೆ: ನನಸಾಗುತ್ತಿದೆ ಆರ್ ಅಶೋಕ್ ಕನಸು

ದಾವಣಗೆರೆ: ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಗೆ ಮಾರ್ಚ್ 12 ರಂದು ಜಿಲ್ಲೆಯಲ್ಲಿ ಚಾಲನೆ ದೊರಕಲಿದೆ. ಅಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ಚಾಲನೆ ನೀಡಲಿದ್ದಾರೆ. ಉಳಿದಂತೆ ಆಯಾಯ ತಾಲ್ಲೂಕು ಕೇಂದ್ರಗಳಲ್ಲಿ ಶಾಸಕರು ಚಾಲನೆ ನೀಡಲಿದ್ದಾರೆ ಎಂದು ಡಿಸಿ ಮಹಾಂತೇಶ್ ಆರ್. ಬೀಳಗಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಹಾತ್ವಕಾಂಕ್ಷೆ ಯೋಜನೆ ಇದಾಗಿದ್ದು, ಕಂದಾಯ ಸಚಿವ ಆರ್. ಅಶೋಕ್ ಅವರ ಕನಸಾಗಿದೆ. ಕಂದಾಯ ದಾಖಲೆಗಳನ್ನು ಸಂಬಂಧಿಸಿದ ಎಲ್ಲರ ಮನೆಗಳಿಗೆ ತಲುಪಿಸುವುದು ಯೋಜನೆಯ ಉದ್ದೇಶ ಹೊಂದಲಾಗಿದೆ ಎಂದರು.

ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡುವ ಮೂಲ ದಾಖಲೆಗಳಾದ ಪಹಣಿ, ಆದಾಯ, ಜಾತಿ ಪ್ರಮಾಣ ಪತ್ರ ಮತ್ತು ಅಟ್ಲಾಸ್‍ಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲಾಗುವುದು ಎಂದು ಹೇಳಿದರು. ಈ ಯೋಜನೆಯಡಿ ಜಿಲ್ಲೆಯ 1.35 ಲಕ್ಷ ರೈತ ಕುಟುಂಬಗಳನ್ನು ಗುರುತಿಸಲಾಗಿದೆ. ಈ ರೈತ ಕುಟುಂಬಗಳಿಗೆ ಅವರಿಗೆ ಕಂದಾಯ ದಾಖಲೆಗಳನ್ನು ನೀಡಲಾಗುವುದು. ಒಟ್ಟಾರೆ 2.93 ಲಕ್ಷ ಪಹಣಿ, 3.23 ಲಕ್ಷ ಆದಾಯ ಮತ್ತು ಜಾತಿ ಪ್ರಮಾಣ ಪತ್ರ, 93 ಸಾವಿರ ಅಟ್ಲಾಸ್ ಸೇರಿದಂತೆ 7.10 ಲಕ್ಷ ದಾಖಲೆಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಅದೇ ದಿನದಂದು ಪತ್ರಗಳನ್ನು ಪಡೆಯಲು ಸಾಧ್ಯವಾಗದಿದ್ದವರು, ಮಾ.21ರಿಂದ 26ರ ನಡುವಿನ ವಾರದಲ್ಲಿ ನಾಡಕಚೇರಿಯಲ್ಲಿ ಉಚಿತವಾಗಿ ಪತ್ರಗಳನ್ನು ಪಡೆಯಬಹುದು. ತಹಶೀಲ್ದಾರರು, ಉಪ ತಹಶೀಲ್ದಾರರು, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಗ್ರಾಮ ಸಹಾಯಕ ಸಿಬ್ಬಂದಿಗಳ ಮೂಲಕ ದಾಖಲೆಗಳನ್ನು ವಿತರಿಸಲಾಗುವುದು ಎಂದು ಹೇಳಿದರು. ಕೊರೊನಾ ನಂತರ ಸ್ಥಗಿತಗೊಳಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮವನ್ನು ಮಾ.17ರಿಂದ ಪುನರಾರಂಭಿಸಲಾಗುವುದು. ಹದಿನೈದು ದಿನಗಳಿಗೊಮ್ಮೆ ಜನಸ್ಪಂದನ ನಡೆಯಲಿದೆ. ಅರ್ಜಿಗಳ ವಿಲೇವಾರಿ ಬಗ್ಗೆ ನಿರಂತರ ಪರಿಶೀಲನೆ ಮಾಡಲಾಗುವುದು ಹೇಳಿದರು.

ಇನ್ನು ಅಡುಗೆ ಎಣ್ಣೆ ಕೃತಕ ಅಭಾವ ಸೃಷ್ಟಿಯಾಗಬಾರದು ಎಂದು ಆಹಾರ ಇಲಾಖೆ ಅಧಿಕಾರಿಗಳು ಗೋದಾಮುಗಳ ತಪಾಸಣೆ ನಡೆಸುವಂತೆ ಸೂಚನೆ ನೀಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button