Breaking NewsLatestಕಲಬುರ್ಗಿಕ್ರೈಂಜಿಲ್ಲಾ ಸುದ್ದಿ

ಕಾರು ಮರಕ್ಕೆ ಡಿಕ್ಕಿ ಸ್ಥಳದಲ್ಲಿಯೇ ಐವರು ದುರ್ಮರಣ

ಕಲಬುರಗಿ: ಅಫಜಲಪುರ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಚಾಲಕ ಹಾಗೂ ನಾಲ್ವರು ಮಹಿಳೆಯರು ಸೇರಿ ಐವರು ದುರ್ಮರಣ ಹೊಂದಿದ್ದಾರೆ.

ಕಲಬುರಗಿ ಜಿಲ್ಲೆ ಗಾಣಗಾಪುರ ದತ್ತಾತ್ರೇಯ ದೇವರ ದರ್ಶನಕ್ಕೆ ಮುಗಿಸಿ ಮಹಾರಾಷ್ಟ್ರ ಕಡೆಗೆ ತೆರಳಯವಾಗ ಅಫಜಲಪುರದ ಬಳ್ಳೂರಗಿ ಕ್ರಾಸ್ ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ನಾಲ್ವರು ಮಹಿಳೆಯರು ಮತ್ತು ಚಾಲಕ ಸ್ಥಳದಲ್ಲಿಯೇ ಉಸಿರುಚಲ್ಲಿದ್ದಾರೆ. ಇಬ್ಬರು ಸ್ಥೀತಿ ಗಂಭೀರವಾಗಿದ್ದು, ಅಫಜಲಪುರ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ.

ಚಾಲಕನ ನಿರ್ಲಕ್ಷ್ಯದಿಂದಾಗಿ ಕಾರು ಡಿಕ್ಕಿ ಹೊಡೆದಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ಏಕಾಏಕಿ ರಸ್ತೆ ಬದಿಗೆ ಇಳಿದು ಮರಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದನು ಎನ್ನಲಾಗುತ್ತಿದೆ.

ಘಟನಾ ಸ್ಥಳಕ್ಕೆ ದೌಡಾಯಿಸಿದ ಅಫಜಲಪುರ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆ ರವಾನಿಸಿ ಕಾರಿನಲ್ಲಿ ಸಿಲುಕಿ ಮೃತರಾದವರ ಶವ ಹೊರಗೆ ತೆಗೆಯುತ್ತಿದ್ದಾರೆ‌. ಮೃತರು ಎಲ್ಲಿಯವರು ಹೆಸರು ಇನ್ನೂ ಪತ್ತೆ ಆಗಿಲ್ಲ

Spread the love

Related Articles

Leave a Reply

Your email address will not be published. Required fields are marked *

Back to top button