Breaking NewsLatestರಾಜ್ಯರಾಷ್ಟ್ರೀಯಸುದ್ದಿ
ಭಗವಂತ್ ಮಾನ್ ಪದಗ್ರಹಣಕ್ಕೆ ದಿನಾಂಕ ನಿಗದಿ

ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಭಗವಂತ್ ಮಾನ್ ಅವರು ಮಾರ್ಚ್ 16 ರಂದು ಪಂಜಾಬ್ ನ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ದೆಹಲಿ ಸಿಎಂ, ಎಎಪಿ ಪಕ್ಷದ ಮುಖ್ಯಸ್ಥರು ಆಗಿರುವ ಕೇಜ್ರಿವಾಲ್ ಅವರಿಗೆ ಆಹ್ವಾನ ನೀಡಲಾಗಿದೆ.
ಮಾರ್ಚ್ 13 ರಂದು ಅಮೃತಸರದಿಂದ ರೋಡ್ ಶೋ ಭಗವಂತ್ ಮಾನ್ ನಡೆಸಲಿದ್ದಾರೆ. ಆಮ್ ಆದ್ಮಿ ಪಕ್ಷ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ 92 ಸ್ಥಾನಗಳನ್ನು ಪಡೆಯುವುದರೊಂದಿಗೆ ಸರ್ಕಾರ ರಚಿಸಲು ಸಂಪೂರ್ಣ ಬಹುಮತವನ್ನು ಸಾಧಿಸಿದೆ. ಇನ್ನು ಇಂದು ಸಂಜೆ ಎಎಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
