Breaking NewsLatestಜಿಲ್ಲಾ ಸುದ್ದಿರಾಜ್ಯಶಿವಮೊಗ್ಗಸುದ್ದಿ
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರಿಡಲು ಮನವಿ

ಬೆಂಗಳೂರು: ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಹೆಸರಿಡಲು ಪ್ರಧಾನಿ ನರೇಂದ್ರ ಮೋದಿ ಹಾಗೂ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮನವಿ ಮಾಡಲಾಗಿದೆ.
ಪ್ರಧಾನಿ ಮೋದಿಗೆ ಯಡಿಯೂರಪ್ಪ ಅಭಿಮಾನಿಗಳು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಜಿಲ್ಲೆ ಅಭಿವೃದ್ಧಿಗೆ ಯಡಿಯೂರಪ್ಪ ಅವರು ಅಪಾರ ಕೊಡುಗೆ ನೀಡಿದ್ದಾರೆ. ರೈತರಿಗಾಗಿ ಅವರು ಹಲವಾರು ಕೆಲಸ ಮಾಡಿದ್ದಾರೆ. ಅವರ ಎಲ್ಲ ಸಾಮಾಜಿಕ ಸೇವೆಗಳನ್ನು ಗಮನಿಸಿ ವಿಮಾನ ನಿಲ್ದಾಣಕ್ಕೆ ಹೆಸರಿಡುವಂತೆ ಸಾಮಾಜಿಕ ಹೋರಾಟಗಾರ ಮರಿಲಿಂಗೇಗೌಡ ಮಾಲೀಪಾಟೀಲ್ ಪ್ರಧಾನಿಗೆ ಪತ್ರ ಬರೆದಿದ್ದಾರೆ.
