Breaking NewsLatestಜಿಲ್ಲಾ ಸುದ್ದಿಮೈಸೂರು

ನಾಳೆ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ಪಂಚ ಮಹಾರಥೋತ್ಸವ; ಬಿಗಿ ಭದ್ರತೆ

ಮೈಸೂರು: ಮಹಾಮಾರಿ ಕೊರೊನಾದಿಂದಾಗಿ ಎಲ್ಲ ಧಾರ್ಮಿಕ ಚಟುವಟಿಕೆಗಳು ಬಂದ್ ಆಗಿದ್ದವು. ಇದೀಗ ಕೊರೊನಾ ಕಡಿಮೆಯಾಗಿದ್ದರಿಂದ ಹಂತ ಹಂತವಾಗಿ ಚಟುವಟಿಕೆಗಳು ನಡೆಯುತ್ತಿದೆ. ಇದೀಗ ಪ್ರಸಿದ್ದ ಶ್ರೀ ಕ್ಷೇತ್ರ ಮೈಸೂರಿನ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ಪಂಚ ಮಹಾರಥೋತ್ಸವ ನಾಳೆ ನಡೆಯಲಿದೆ.

ಮುಂಜಾನೆ 3.30 ರಿಂದ 4.30ರೊಳಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಮಹಾ ರಥೋತ್ಸವಕ್ಕೆ ಚಾಲನೆ ಸಿಗಲಿದೆ. 100 ಅಡಿ ಎತ್ತರ, 110 ಟನ್ ತೂಕದ ಗೌತಮ ರಥ ದೇವಸ್ಥಾನದ ಸುತ್ತಲಿನ 1.5 ಕಿ.ಮೀ ರಥ ಬೀದಿಯಲ್ಲಿ ಸಾಗಲಿದೆ.ಈ ವೇಳೆ ವಿವಧೆಡೆಯಿಂದ ಸಾವಿರಾರು ಭಕ್ತರು ಆಗಮಿಸಲಿದ್ದಾರೆ. ಹೀಗಾಗಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button