
ಡಿಸ್ಪುರ್: ಬಾಲಿವುಡ್ ನಲ್ಲಿ ಭಾರಿ ಸಂಚಲನ ಮೂಡಿಸಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದೀಗ ಈ ಸಿನಿಮಾ ನೋಡಲು ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆಯನ್ನು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಘೋಷಣೆ ಮಾಡಿದ್ದಾರೆ.
1990ರ ದಶಕದಲ್ಲಿ ಕಾಶ್ಮೀರಿ ಪಂಡಿತರನ್ನು ಬಲವಂತವಾಗಿ ಹೇಗೆ ಕಾಶ್ಮೀರದಿಂದ ಕಳುಹಿಸಲಾಯಿತು ಎಂಬ ಸತ್ಯವನ್ನು ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ತೋರಿಸಲಾಗಿದೆ. ಹೀಗಾಗಿ ಈ ಸಿನಿಮಾ ವೀಕ್ಷಿಸಲು ಅರ್ಧ ದಿನದ ರಜೆ ಘೋಷಣೆ ಮಾಡಿದ್ದಾರೆ. ಈ ಘೋಷಣೆಯನ್ನು ಮಾಡಲು ತುಂಬಾ ಸಂತೋಷವಾಗಿದೆ. ಈ ಬಗ್ಗೆ ಅವರು ತಮ್ಮ ಮೇಲಾಧಿಕಾರಿಗಳಿಗೆ ತಿಳಿಸಬೇಕು. ಸಿನಿಮಾಗೆ ಹೋಗಿದ್ದ ಟಿಕೆಟ್ಗಳನ್ನು ಮರುದಿನ ಮೇಲಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
