ಆರೋಗ್ಯಕ್ಕೆ ಅಮೃತ ಈ ಅಮೃತಬಳ್ಳಿ ಗಿಡ

ಅಮೃತಬಳ್ಳಿ. ಹೆಸರೇ ಹೇಳುವಂತೆ ಇದು ಅಮೃತಕ್ಕೆ ಸಮಾನವಾದ ಪದಾರ್ಥ. ಸಾಕಷ್ಟು ಔಷಧೀಯ ಗುಣಗಳನ್ನು ಹೊಂದಿರುವ ಅಮೃತಬಳ್ಳಿ ಜೀವ ರಕ್ಷಕವಾಗಿ ಕೆಲಸ ಮಾಡುತ್ತದೆ. ಅಮೃತಬಳ್ಳಿಯ ಎಲೆ, ಕಾಂಡ, ಬೇರು ಎಲ್ಲವೂ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅಮೃತಬಳ್ಳಿಯ ಪ್ರತಿಯೊಂದು ಭಾಗವು ಆರೋಗ್ಯಕ್ಕೆ ಸಾಕಷ್ಟು ಅತ್ಯುತ್ತಮವಾಗಿದೆ.
ಎಲ್ಲಾ ಬಗೆಯ ಜ್ವರಗಳಿಗೂ ಅಮೃತಬಳ್ಳಿ ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ. ಮಧುಮೇಹ ರೋಗಕ್ಕೆ ಅಮೃತಬಳ್ಳಿಯನ್ನ ಔಷಧಿಯಾಗಿ ಬಳಸುತ್ತಾರೆ. ಅಮೃತಬಳ್ಳಿಯ ತಜಾ ಕಾಂಡವನ್ನು ಜಜ್ಜಿ , ರಸ ತೆಗೆದು 2 ಚಮಚೆ ರಸವನ್ನು ಜೇನು ತುಪ್ಪದೊಂದಿಗೆ ಬೆರೆಸಿ ದಿನಕ್ಕ್ಕೆ 3 ಬಾರಿ ಆಹಾರ ಸೇವನೆಯ ಮುಂಚೆ ಕುಡಿಯ ಬೇಕು.
ಬಾಯಾರಿಕೆ, ವಾಂತಿ, ವಾಕರಿಕೆ: ಸುಮಾರು 25 ಗ್ರಾಂನಷ್ಟು ಅಮೃತಬಳ್ಳಿಯನ್ನು ಅರೆದು ಶುದ್ಧವಾದ ನೀರು ಹಾಕಿ ಕಾಯಿಸಿ ಕಷಾಯ ಮಾಡಿಟ್ಟುಕೊಳ್ಳಬೇಕು. ದಿನಕ್ಕೆ ಮೂರು ಬಾರಿ ಸ್ವಲ್ಪ ಜೇನುತುಪ್ಪ ಸೇರಿಸಿ ಕುಡಿಯುವುದರಿಂದ ಬಾಯಾರಿಕೆ, ವಾಂತಿ, ವಾಕರಿಕೆ ಸುಸ್ತು ಮಾಯವಾಗುತ್ತದೆ.
ಮೂತ್ರನಾಳದಲ್ಲಿ ಕಲ್ಲು: ಅಮೃತಬಳ್ಳಿ, ನೆಗ್ಗಿಲು, ಅಶ್ವಗಂಧ, ನೆಲ್ಲಿ, ಶುಂಠಿಯನ್ನ ಸಮಪ್ರಮಾಣದಲ್ಲಿ ನಯವಾಗಿ ಚೂರ್ಣ ಮಾಡಿಟ್ಟುಕೊಳ್ಳುವುದು. 10ಗ್ರಾಂನಷ್ಟು ಚೂರ್ಣವನ್ನು ಶುದ್ಧ ನೀರು ಹಾಕಿ ಕಷಾಯ ಮಾಡಿ ವೇಳೆಗೆ ಒಂದು ಟೀ ಚಮಚದಷ್ಟು ಕುಡಿಯಬೇಕು.
ಮೈಮೇಲೇಳುವ ಪಿತ್ತದ ಗಂಧೆಗಳು: ಅಮೃತಬಳ್ಳಿಯ ಎಲೆ ಸಾಸಿವೆ ಶ್ರೀಗಂಧದ ಚಕ್ಕೆ ಇವುಗಳ ಸಮತೂಕವನ್ನು ಎಮ್ಮೆಯ ಹಾಲಿನಲ್ಲಿ ಅರೆದು ಮೈಗೆ ಹಚ್ಚುವುದರಿಂದ ಪುತ್ತದ ಗಂಧೆಗಳು ನಿವಾರಣೆಯಾಗುತ್ತದೆ. ಪಿತ್ತ ವಿಕಾರ ಕಡಿಮೆ ಆಗಿ ಪಿತ್ತದ ಗಂಧೆಗಳು ಮತ್ತು ನೆವೆ ಉರಿ ಶಮನವಾಗುವುದು.
ಹೊಟ್ಟೆ ಉರಿ: ಅಮೃತಬಳ್ಳಿಯ ಹಸಿಸೊಪ್ಪಿನ ರಸಕ್ಕೆ 2 ಟೀ ಚಮಚದಷ್ಟು ಓಂಪುಡಿ ಸೇರಿಸಿ ಮಜ್ಜಿಗೆಯಲ್ಲಿ ಕದಡಿ ಕುಡಿಯಬೇಕು.
ವಾತ ಜ್ವರದಲ್ಲಿ: ಅಮೃತಬಳ್ಳಿ ತ್ರಫಲ ಚೂರ್ಣ, ತುಂಗೇಗುಡ್ಡೆ ಕೊತ್ತಂಬರಿ, ಶತಾವರಿ, ಕಳ್ಳಂಗಡಲೆ ಮತ್ತು ಬೇಲದ ಬೇರು ಇವುಗಳ ಸಮತೂಕದಷ್ಟನ್ನು ಚೆನ್ನಾಗಿ ಒಣಗಿಸಿ ಪುಡಿ ಮಾಡಿಟ್ಟುಕೊಳ್ಳಬೇಕು. ಸ್ವಲ್ಪ ಚೂರ್ಣಕ್ಕೆ ಎರಡು ಬಟ್ಟಲು ನೀರು ಹಾಕಿ ಕಾಯಿಸಿ ಅರ್ಧ ಬಟ್ಟಲು ಕಷಾಯವನ್ನು ಮಾಡಿ ಆರಿಸಿ ಕುಡಿಯಬೇಕು.
ಬುದ್ಧಿ ಭ್ರಮಣೆಗೆ: ಹಸಿ ಅಮೃತಬಳ್ಳಿಯನ್ನು ತಣ್ಣನೆಯ ಹಾಲಿನಲ್ಲಿ ನುಣ್ಣನೆ ರುಬ್ಬಿ ತಲೆಗೆ ಪಟ್ಟು ಹಾಕಬೇಕು. ಒಂದೆರಡು ತಾಸುಗಳ ನಂತರ ಬಿಸಿ ನೀರಿನಿಂದ ಸ್ನಾನ ಮಾಡಬೇಕು.
ದೃಷ್ಟಿಮಾಂದ್ಯದಲ್ಲಿ: ಅಮೃತಬಳ್ಳಿ ತ್ರಿಫಲ ಚೂರ್ಣ, ಹಿಪ್ಪಲಿ ಸಮ ಪ್ರಮಾಣ ಸೇರಿಸಿ ಜಜ್ಜಿ ಕಷಾಯ ಮಾಡುವುದು. ಅರ್ಧ ಬಟ್ಟಲು ಕಷಾಯಕ್ಕೆ ಜೇನುತುಪ್ಪ ಸೇರಿಸಿ ಕುಡಿಯುವುದು.
ಬೊಜ್ಜು ಮತ್ತು ಕೊಬ್ಬು ಕಡಿಮೆ ಆಗಲು, ಆಯಸ್ಸು ಹೆಚ್ಚಲು ಅಮೃತಬಳ್ಳಿ ಪರಿಣಾಮಕಾರಿ ಔಷಧಿ. ಮೇಲಿನ ಕಷಾಯಕ್ಕೆ ಒಂದು ಗುಲಗಂಜಿಯಷ್ಟು ಲೋಹ ಭಸ್ಮವನ್ನು ಮತ್ತು ಒಂದು ಟೀ ಚಮಚ ಜೇನು ತುಪ್ಪವನ್ನು ಸೇರಿಸಿ ಕುಡಿಯಬೇಕು. ಸುಮಾರು 40 ದಿವಸ ಅರಳ ಅಂಗಸಾಧನೆ, ಕೊಬ್ಬು ರಹಿತ ಆಹಾರ, ತಣ್ಣೀರು ಸ್ನಾನ ಮತ್ತು ದೀರ್ಘ ನಡಿಗೆ ಅಭ್ಯಾಸ ಮಾಡಿಕೊಳ್ಳುವುದು.
ಸ್ತ್ರೀಯರ ರಕ್ತ ಪ್ರದರಕ್ಕೆ: 20ಗ್ರಾಂ ಹಸಿ ಅಮೃತಬಳ್ಳಿಯ ರಸಕ್ಕೆ ಒಂದು ಟೀ ಚಮಚದಷ್ಟು ಸಕ್ಕರೆ ಬೆರೆಸಿ ದಿವಸಕ್ಕೆ ಎರಡು ವೇಳೆ ಸೇವಿಸಬೇಕು.
ಉರಿ ಮೂತ್ರದಲ್ಲಿ: ಅಮೃತಬಳ್ಳಿ ನಯವಾದ ಚೂರ್ಣವನ್ನು ಹಸುವಿನ ಹಾಲಿನಲ್ಲಿ ಕದಡಿ ದಿವಸಕ್ಕೆ ಎರಡು ಬಾರಿ ಸೇವಿಸುವುದು ಅಥವಾ ಮಜ್ಜಿಗೆಯಲ್ಲಿ ತೆಗೆದುಕೊಳ್ಳುವುದು, ಪ್ರಮಾಣ ಒಂದು ಗ್ರಾಂ ಒಂದು ಭಾರಿ.
ಸೂಚನೆ: ನಾವು ಪ್ರಕಟಿಸುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದಾರರಲ್ಲ.




