Breaking NewsLatestಮೆಟ್ರೋರಾಜ್ಯಸುದ್ದಿ
ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಅಪಘಾತ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಸ್ವಿಫ್ಟ್ ಕಾರು ಡಿಕ್ಕಿಯಾದ ಘಟನೆ ನಾಗರಭಾವಿ ಫ್ಲೈ ಓವರ್ ಮೇಲೆ ನಡೆದಿದೆ.
ಈ ಅಪಘಾತದಲ್ಲಿ ಕಾರು ಚಾಲಕ ಮತ್ತು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಸದ್ಯ ಗಾಯಾಳು ನಾಗರಭಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ಲೈ ಓವರ್ ಮೇಲೆ ತಿರುವುಗಳು ಹೆಚ್ಚಾಗಿವೆ. ಹೀಗಾಗಿ ಒಂದು ತಿಂಗಳಲ್ಲಿ ಮೂರು ಅಪಘಾತ ಸಂಭವಿಸಿದೆ. ಇದರಿಂದ ಟ್ರಾಫಿಕ್ ಪೊಲೀಸರಿಗೆ ಮನವಿ ಮಾಡಿದ್ರೂ ಕೂಡ ಇತ್ತ ಗಮನಹರಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
