Breaking NewsLatestರಾಜ್ಯಸುದ್ದಿ

ಇಂದು ಮತ್ತು ನಾಳೆ ಬೆಂಗಳೂರು, ಮಡಿಕೇರಿ, ಸೇರಿದಂತೆ ಹಲವು ಕಡೆ ಗುಡುಗು ಸಹಿತ ಮಳೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಹಲವು ಕಡೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು (ಮಾ.19) ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾ.20ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಮಾ. 21ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆ ಇದೆ. ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳ ಕೆಲವು ಕಡೆ ಮಾ.20 ಮತ್ತು ಮಾ.21ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ಮಾರ್ಚ್ 20 ಹಾಗೂ 21ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಕೊಡಗು, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗ್ತಿದೆ. ಮಾರ್ಚ್ 20 ಮತ್ತು ಮಾರ್ಚ್ 21ರಂದು ಚಂಡಮಾರುತ ಉಂಟಾಗಲಿದ್ದು, ಮಾರ್ಚ್ 21ರವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Spread the love

Related Articles

Leave a Reply

Your email address will not be published. Required fields are marked *

Back to top button