Breaking NewsLatestರಾಷ್ಟ್ರೀಯಸುದ್ದಿ

ಚೀನಾದಲ್ಲಿ ಮತ್ತೆ ಕೊರೊನಾ ಕೇಸ್; ಒಂದೇ ದಿನ ಇಬ್ಬರು ಸಾವು

ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ ಎನ್ನುವಷ್ಟರಲ್ಲೇ ಮತ್ತೆ ಕೆಲವು ರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಚೀನಾ, ದಕ್ಷಿಣ ಕೊರಿಯಾ, ಸಿಂಗಾಪುರ, ಯುಕೆ, ಯುಎಸ್​​ಗಳಲ್ಲಿ ಮತ್ತೆ ನಿತ್ಯದ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಸದ್ಯ ಕೊರೊನಾ ರೂಪಾಂತಾರಿ ಒಮಿಕ್ರಾನ್ ವೈರಾಣುವಿನಿಂದಲೇ ಕೊರೊನಾ ಅಲೆ ಜಾಸ್ತಿಯಾಗುತ್ತಿದೆ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ.

ಇನ್ನು ಮೊದಲು ಶುರುವಾದ ಚೀನಾದಲ್ಲಿ ಮತ್ತೆ ಕೊರೊನಾ ಅಲೆ ಹಬ್ಬಿದೆ. ಈ ಬಾರಿ ಮೊದಲಿಗಿಂತಲೂ ಭಯಾನಕವಾಗಿರಲಿದೆ. ಈಗಾಗಲೇ ಚೀನಾದಲ್ಲಿ ಕೊರೊನಾ ವೈರಸ್ ಗೆ ಒಂದೇ ದಿನ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇಂದು ಒಟ್ಟು 2157 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೆಲ ಭಾಗಗಳಲ್ಲಿ ಲಾಕ್ ಡೌನ್ ಜೊತೆಗೆ ಸೀಲ್ ಡೌನ್ ಮಾಡಲಾಗಿದೆ. ಅಷ್ಟೇ ಅಲ್ಲ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ನಿರ್ಬಂಧ, ಹೊರ ಜಗತ್ತಿನೊಂದಿಗೆ ಸಂಪರ್ಕ ಕಡಿತದಂಥ ಕ್ರಮಗಳಲ್ಲಿ ಯಾವುದೇ ಸಡಿಲಿಕೆ ಇಲ್ಲ ಎಂದೂ ಸ್ಪಷ್ಟಪಡಿಸಿದೆ.

Spread the love

Related Articles

Leave a Reply

Your email address will not be published. Required fields are marked *

Back to top button