Breaking NewsLatestಕ್ರೈಂಜಿಲ್ಲಾ ಸುದ್ದಿಮೈಸೂರುರಾಜ್ಯಸುದ್ದಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿರುವ ಇನ್ಸೆಪೆಕ್ಟರ್ ಅಮಾನತು!

ಮೈಸೂರು: ವಿಜಯನಗರ ಪೊಲೀಸ್ ಠಾಣೆ ಇನ್ಸ್​​ಪೆಕ್ಟರ್ ಬಾಲಕೃಷ್ಣ ಅವರನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಆದೇಶ‌ ಹೊರಡಿಸಿದ್ದಾರೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಆರೋಪದಡಿ ಮಾರ್ಚ್​​ 16ರಂದು ಎಸಿಬಿ ಅಧಿಕಾರಿಗಳು ಬಾಲಕೃಷ್ಣ ಅವರ ನಿವೇಶನದ ಮೇಲೆ ದಾಳಿ ಮಾಡಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿರುವ ದಾಖಲೆಗಳನ್ನ ಸೂಕ್ಷ್ಮವಾಗಿ ಗಮನಿಸಿದ್ರೆ, ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಮಾಡಿರುವ ಆರೋಪದಲ್ಲಿ ಹುರುಳಿದೆ. ಈ ಹಿನ್ನೆಲೆಯಲ್ಲಿ​ ಎಸಿಬಿ ನ್ಯಾಯಾಲಯ ವಿಚಾರಣೆ ನಡೆಸಿ ಬಾಲಕೃಷ್ಣ ನಿರ್ಧೋಷಿ ಎಂದು ಸಾಬೀತು ಪಡಿಸಬೇಕಿದೆ. ಪ್ರಸ್ತುತ ಆರೋಪ ಹೊತ್ತಿರುವ ಪೊಲೀಸ್ ಅಧಿಕಾರಿ ಬಾಲಕೃಷ್ಣ ಅವರನ್ನು ಅಮಾನತು ಮಾಡಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button