Breaking NewsLatestಕೊಡಗುಕ್ರೈಂಜಿಲ್ಲಾ ಸುದ್ದಿ

ಕಾರು ಅಪಘಾತ – ಇಬ್ಬರಿಗೆ ಗಂಭೀರ ಗಾಯ

ಕೊಡಗು : ಜಿಲ್ಲೆಯ ಗಡಿಭಾಗದಲ್ಲಿ ಕಾರು ಅವಘಡಕ್ಕೀಡಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಕುಟ್ಟದಲ್ಲಿ ನಡೆದಿದೆ.

ಕೇರಳ ರಾಜ್ಯದ ಎರ್ನಾಕುಲಂ ನಗರದ ನಿವಾಸಿ ಡಾ.ಮನೋಜ್ ಈಪನ್ ಮ್ಯಾಥ್ಯ (55) ಹಾಗೂ ಅವರ ಪುತ್ರ ಜಯಾಜ್ (10) ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಕೊಡಗು ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ಪರೀಕ್ಷೆಯ ಮೇಲ್ವಿಚಾರಣೆಗಾಗಿ ಹೋಗಿದ್ದು ಸಂಜೆ ಮನೆಗೆ ವಾಪಾಸ್ಸಾಗುತ್ತಿದ್ದಾಗ ಡಾ.ಮನೋಜ್ ಈಪನ್ ಅವರ ಕಾರು ನಿಯಂತ್ರಣ ಕಳೆದುಕೊಂಡು ಮೋರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮನೋಜ್ ಹಾಗೂ ಜಯಾಜ್ ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button