Breaking NewsLatestರಾಜ್ಯಸುದ್ದಿ

ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಗುಡುಗು ಸಹಿತ ಮಳೆ

ಬೆಂಗಳೂರು: ನಗರದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರಿಂದ ಜನರು ವೈರಾಣಾಗಿದ್ದಾರೆ. ಹೀಗಾಗಿ ರಾಜ್ಯದ ಜನರಿಗೆ ಆಗಾಗ ಮಳೆರಾಯ ತಂಪೆರಿಸುತ್ತಾನೆ. ಇದೀಗ ಅಂಡಮಾನ್‌ ನಿಕೋಬಾರ್ ನಲ್ಲಿ ವಾಯುಭಾರ ಕುಸಿತದಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮುಂತಾದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮೂರು ದಿನ ರಾಜ್ಯದಲ್ಲಿ ಗುಡುಗು ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್ 26ರ ತನಕ ಮಳೆಯಾಗಲಿದೆ.ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಇಂದು ಕೂಡ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್ 26ರ ತನಕ ಮಳೆಯಾಗಲಿದೆ.ಈ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚುಗಳ ಸಹಿತ ಚದುರಿದ ಮಳೆಯಾಗಲಿದೆ. ಮುಂದಿನ 4 ದಿನಗಳ ಕಾಲ ಇಡೀ ದಕ್ಷಿಣ ಭಾರತದಲ್ಲಿ ಮಳೆಯ ಮುನ್ಸೂಚನೆ ಹವಮಾನ ಇಲಾಖೆ ನೀಡಿದೆ.

Spread the love

Related Articles

Leave a Reply

Your email address will not be published. Required fields are marked *

Back to top button