ಧಾರವಾಡದಲ್ಲಿ 2ನೇ ದಿನಕ್ಕೆ ಕಾಲಿಟ್ಟ ಎಎಪಿ ಕಾರ್ಯಕರ್ತರ ಪ್ರತಿಭಟನೆ

ಧಾರವಾಡ: ಇತ್ತೀಚೆಗೆ ರಾಜ್ಯದಲ್ಲಿ ನಡೆದ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಹಾಗೂ ಅಕ್ರಮ ನೇಮಕಾತಿ ಕುರಿತು ತನಿಖೆ ನಡೆಸುವಂತೆ ಅಗ್ರಹಿಸಿ, ಧಾರವಾಡದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನಾ ಧರಣಿ ಇಂದು ಎರಡನೇಯ ದಿನವು ಮುಂದುವರೆದಿದೆ.
ಆಮ್ ಆದ್ಮಿ ಪಕ್ಷದ ಧಾರವಾಡ ಜಿಲ್ಲಾ ಘಟಕದ ನೇತೃತ್ವದಲ್ಲಿ, ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಧರಣಿ ನಡೆಯುತ್ತಿದ್ದು, ಪ್ರತಿಭಟನೆಯಲ್ಲಿ ಪಿಎಸ್ಐ ಹುದ್ದೆಯ ಅಕಾಂಕ್ಷಿಗಳು ಕೂಡಾ ಭಾಗವಹಿಸಿ ಸರ್ಕಾರದ ವಿರುದ್ಧ ಹಾಗೂ ಗೃಹ ಸಚಿವರ ವಿರುದ್ಧ ಧಿಜ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿಯೇ ಕರ್ನಾಟಕ ರಾಜ್ಯದ ಪೊಲೀಸ ಇಲಾಖೆಯಗೆ ತನ್ನದೆಯಾದ ಗೌರವ ಹೊಂದಿದೆ, ಆದರೆ ಇತ್ತೀಚಿಗೆ ನಡೆದ ರಾಜ್ಯ ಪೊಲೀಸ್ ಇಲಾಖೆಯ ಪಿಎಸ್ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ಹಾಗೂ ಅವ್ಯವಹಾರ ನಡೆದಿದೆ. ಸಮಾಜದಲ್ಲಿ ಅವ್ಯವಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವಬೇಕಾದ ಇಲಾಖೆಯಲ್ಲಿಯೇ ಈ ರೀತಿ ವ್ಯವಸ್ಥೆ ಆದರೆ. ಮುಂಬರುವ ದಿನಗಳಲ್ಲಿ ಅಲ್ಲಿ ನೇಮಕವಾಗುವ ಅಧಿಕಾರಿಗಳು ಕೂಡಾ ಭ್ರಷ್ಟಾಚಾರ ಮಾಡಬೇಕಾಗುತ್ತದೆ. ಅಷ್ಟೇಯಲ್ಲದೆ ನೇಮಕಾತಿ ಪರೀಕ್ಷೆಯಲ್ಲೂ ಪರೀಕ್ಷಾ ನಿಯಮಾವಳಿಗಳನ್ನು ಗಾಳಿಗೆ ತೂರಿ ನಡೆಸಲಾಗಿದೆ. ಹಾಗಾಗಿ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಪಿಎಸ್ಐ ಹುದ್ದೆಯ ನೇಮಕಾತಿ ಕುರಿತು ರಾಜ್ಯ ಸರ್ಕಾರ, ಗೃಹ ಸಚಿವರು ತನಿಖೆ ನಡೆಸಬೇಕು ಎಂದು ಅಗ್ರಹಿಸಿದರು.
